HomeFresh Newsನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ - 2025

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ – 2025

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಕಾಲೇಜು ಮುಂಭಾಗದಲ್ಲಿ ದೀಪ ಬೆಳಗಿಸಿ ಮಹಾಬಲಿ ಚಕ್ರವರ್ತಿ ವೇಷಧಾರಿ ಜೊತೆ ಸಿಂಗಾರಿ ಮೇಳದ ಮೂಲಕ ಕರೆತಂದು, ಕೆವಿಜಿ ಷಶ್ಠ್ಯಬ್ಧ ರಂಗಮಂದಿರದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಓಣಂ ಕಾರ್ಯಕ್ರಮ ಉತ್ಸವಂ 2025ನ್ನು ಉದ್ಘಾಟಿಸಿದರು. ಅತಿಥಿಗಳ ಶುಭನುಡಿಗಳೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.

ವೇದಿಕೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ, ಪದವಿ ಪೂರ್ವ ಪ್ರಾಂಶುಪಾಲೆ ಮಿಥಾಲಿ ಪಿ ರೈ ಹಾಗೂ ಎರಡೂ ವಿದ್ಯಾಸಂಸ್ಥೆಗಳ ಎಲ್ಲಾ ಬೋದಕ ಬೋದಕೇತರ ವೃಂದದವರು ಉಪಸ್ಥಿತರಿದ್ದರು.

ನಂತರ ವೇದಿಕೆಯಲ್ಲಿ ಚೆಂಡೆವಾದನ ಸಿಂಗಾರಿಮೇಳ ಪ್ರದರ್ಶನ ಹಾಗೂ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕ ವೃಂದದವರಿಂದ ತಿರುವಾದಿರ ನೃತ್ಯ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಮದ್ಯಾಹ್ನ ಸಾಂಪ್ರದಾಯಿಕ ಓಣಂ ಸದ್ಯ ಸಹಭೋಜನ ಏರ್ಪಡಿಸಲಾಗಿತ್ತು. ನಂತರ ಓಣಂ ಪ್ರಯುಕ್ತ ಏರ್ಪಡಿಸಿದ ವಿವಿಧ ಆಟಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಕಾಲೇಜು ಸಿಬ್ಬಂದಿಗಳು ಪಾಲ್ಗೊಂಡರು. ಎಲ್ಲರೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳಲ್ಲಿ ಮಿಂಚಿ, ಚೆಂಡೆವಾದನ ಸಿಂಗಾರಿಮೇಳಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಅಂತಿಮ ವಿಜ್ಞಾನ ಪದವಿಯ ಕು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕಾಲೇಜು ಸಾಂಸ್ಕೃತಿಕ ಸಂಘದ ವಿಷ್ಣು ಪ್ರಶಾಂತ್, ಹರಿಪ್ರಸಾದ್ ಹಾಗೂ ಇನ್ನಿತರ ಉಪನ್ಯಾಸಕರು ಮತ್ತು ವಿದ್ಯಾರ್ಥಿ ಸಂಘದ ಅಪೇಕ್ಷಿತ ನಾಯಕರು, ತರಗತಿ ಪ್ರತಿನಿಧಿಗಳು ಸಹಕರಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments