Homeಕರಾವಳಿಪುತ್ತೂರಿನಲ್ಲಿ ಅನಾರೋಗ್ಯದಿಂದ ಬಾಣಂತಿ ಮೃತ್ಯು

ಪುತ್ತೂರಿನಲ್ಲಿ ಅನಾರೋಗ್ಯದಿಂದ ಬಾಣಂತಿ ಮೃತ್ಯು

ಪುತ್ತೂರು: ೨ ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ನಡೆದಿದೆ.

ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್ ಮೃತಪಟ್ಟವರು. ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಕ್ಷತಾ ಅವರ ತವರು ಮನೆ ಉಪ್ಪಿನಂಗಡಿಯಾಗಿದ್ದು, ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯಲ್ಲಿ ಬಿಕಾಂ ಪದವಿಯನ್ನು ಪಡೆದಿದ್ದರು. ೨ ತಿಂಗಳ ಹಿಂದೆಯಷ್ಟೆ ಅವರು ಮಗುವಿಗೆ ಜನ್ಮ ನೀಡಿದ ಬಳಿಕ ಅನಾರೋಗ್ಯದಿಂದಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments