ಪುತ್ತೂರು:ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ಅನ್ಯಕೋಮಿನ ಅಪ್ರಾಪ್ತ ಬಾಲಕಿಯೋರ್ವರಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ವರದಿಯಾಗಿದ್ದು ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮೈಂದನಡ್ಕ ನಿವಾಸಿ ಆದಂ(56ವ.)ಎಂಬಾತ, ಸ್ಥಳೀಯ ಬಾಲಕಿಯೋರ್ವರು ಬೀಡಿ ಬ್ರಾಂಚಿಗೆಂದು ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ಹೇಳಲಾಗಿದೆ.
