ಪುತ್ತೂರಿನಲ್ಲಿ ಜಾನುವಾರುಗಳ ಏಲಂ ಪ್ರಕ್ರಿಯೆಗೆ ವಿರೋಧ

ಜುಲೈ.29ರಂದು 64 ಜಾನುವಾರುಗಳನ್ನು ಏಲಂ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು, ನಕಲಿ ರೈತರ ಹೆಸರಿನಲ್ಲಿ ಜಾನುವಾರುಗಳನ್ನು ಪಡೆದುಕೊಂಡು ಅವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುವ ಸಾಧ್ಯತೆಗಳಿವೆ. ಆದ ಕಾರಣ ಕೂಡಲೇ ಜಾನುವಾರುಗಳ ಏಲಂ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೆ. ಕೃಷ್ಣ ಪ್ರಸನ್ನ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾನುವಾರುಗಳ ಏಲಂ ಪ್ರಕ್ರಿಯೆಯನ್ನು ಮುಂದೂಡಬೇಕೆಂದುಇಲ್ಲದಿದ್ದರೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಉಗ್ರ ಪ್ರತಿಭಟನೆಯನ್ನು ನಡೆಸಲಿದೆ ಎಂದು ಅವರು ಎಚ್ಚರಿಸಿದರು. ರೈತರ ಹೆಸರಿನಲ್ಲಿ ಗೋ ಹಂತಕರು ಜಾನುವಾರುಗಳನ್ನು ಖರೀದಿಸಿ ಕಸಾಯಿಖಾನೆಗೆ ಕೊಂಡೊಯ್ಯುವ ಸಾಧ್ಯತೆ ಇದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್., ಪುತ್ತೂರು ಜಿಲ್ಲಾ ಗೋರಕ್ಷಾ ಪ್ರಮುಖ್ ಮಹೇಶ್ ಬಜತ್ತೂರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.