HomeFresh Newsಬಸ್ರೂರಿನಲ್ಲಿ ಮನೆಯ ಮೇಲೆ ಬಿದ್ದ ಮರ: ಇಬ್ಬರಿಗೆ ಗಾಯ

ಬಸ್ರೂರಿನಲ್ಲಿ ಮನೆಯ ಮೇಲೆ ಬಿದ್ದ ಮರ: ಇಬ್ಬರಿಗೆ ಗಾಯ

ಕುಂದಾಪುರ: ಕರಾವಳಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭೀಕರ ಗಾಳಿ ಮಳೆಗೆ ಕುಂದಾಪುರ ತಾಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಳೆಯ ಆರ್ಭಟ ಜೋರಾಗಿದ್ದು ಬುಧವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣಪಯ್ಯ ಗಾಣಿಗ ಎಂಬವರ ಮನೆಯ ಮೇಲೆ ಧೂಪದ ಮರ ಬಿದ್ದು ಮೇಲ್ಛಾವಣಿ ಕುಸಿದಿದೆ. ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹದಾಕಾರದ ಮರ ಬಿದ್ದ ಪರಿಣಾಮ ಸುಮಾರು 5 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಗ್ರಾಮ ಲೆಕ್ಕಿಗ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಪಿಡಿಓ ಸ್ಥಳಕ್ಕೆ ಆಗಮಿಸಿದ್ದು, ಮರ ತೆರವು ಕಾರ್ಯಾಚರಣೆ ಮುಂದುವರೆದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments