HomeFresh Newsಬೈಕಂಪಾಡಿಯಲ್ಲಿ ನೂತನ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಅವರಿಂದ ಶಿಲಾನ್ಯಾಸ

ಬೈಕಂಪಾಡಿಯಲ್ಲಿ ನೂತನ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಅವರಿಂದ ಶಿಲಾನ್ಯಾಸ

ಮಂಗಳೂರು: ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಘನ ಉಪಸ್ಥಿತಿ ವಹಿಸಿದ್ದರು.
ಸ್ಥಳೀಯ ಶಾಸಕರಾದ ಭರತ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷ ರಜನಿ ದಗ್ಗಣ್ಣ, ಕಾರ್ಯದರ್ಶಿ ಸಿ.ಎಚ್. ಮೋಹನ್, ಎಪಿಎಂಸಿ ಆಡಳಿತ ಮಂಡಳಿ ಸಮಿತಿಯ ಸದಸ್ಯರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments