HomeFresh Newsಬ್ರಹ್ಮಾವರ: ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹ*ತ್ಯೆ:ಮಗ ಪೊಲೀಸ್ ವಶಕ್ಕೆ

ಬ್ರಹ್ಮಾವರ: ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹ*ತ್ಯೆ:ಮಗ ಪೊಲೀಸ್ ವಶಕ್ಕೆ

ಬ್ರಹ್ಮಾವರ : ಮಗನೊಬ್ಬ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆಗೈದ ಪ್ರಕರಣ ಬ್ರಹ್ಮಾವರದ ಗಾಂಧಿನಗರ ಎಂಬಲ್ಲಿ ರವಿವಾರ ರಾತ್ರಿ ವೇಳೆ ನಡೆದಿದೆ.

ಗಾಂಧಿನಗರದ ನಿವಾಸಿ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಕೊಲೆಗೀಡಾದ ದಂಪತಿ. ಕೊಲೆ ಆರೋಪಿ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮೆಹಬೂಬ್ ಅಲಿ ಲಾರಿ ಚಾಲಕರಾಗಿ ದುಡಿಯುಗಿದ್ದು, ಅವರ ಮಗ ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈತ ಕ್ಷುಲ್ಲಕ ಕಾರಣಕ್ಕಾಗಿ ತಂದೆ ತಾಯಿಯೊಂದಿಗೆ ಜಗಳವಾಡಿ ಸುತ್ತಿಗೆಯಿಂದ ಬಡಿದು, ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೊಲೆ ಮಾಡಿದ ಬಳಿಕ ಈತನೇ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹತ್ಯೆಗೆ ಕಾರಣ ಏನೆಂಬುದು ತನಿಖೆಯಿಂದ ತಿಳಿದು ಬರಬೇಕಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments