HomeFresh Newsಮಂಗಳೂರಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರ

ಮಂಗಳೂರಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರ

ಮಂಗಳೂರಿನ ರೆಡ್ ಕ್ರಾಸ್ ಸೊಸೈಟಿಯ ಪ್ರೇರಣಾ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.

ಕಾರ್ಯಾಗಾರವನ್ನು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ವಿಭಾಗದ ಸಹಾಯಕ ನಿರ್ದೇಶಕ ಆನಂದ ಪಿ. ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಉಪನ್ಯಾಸಕರು ನಿರಂತರ ವಿದ್ಯಾರ್ಥಿಗಳಾಗಿರಬೇಕು” ಎಂದು ಕರೆ ನೀಡಿದರು. ಶಿಕ್ಷಣ ಕ್ಷೇತ್ರ ನಿರಂತರವಾಗಿ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರು ಕಾಲಕ್ಕೆ ತಕ್ಕಂತೆ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ. ನವೀನ್ ಶೆಟ್ಟಿ ಕೆ. ಮಾತನಾಡಿ, ಆಧುನಿಕ ಅರ್ಥಶಾಸ್ತ್ರ ಹಾಗೂ ಹೊಸ ಯುಗದ ವ್ಯಾಪಾರ-ವಹಿವಾಟಿನ ಸ್ವರೂಪವನ್ನು ಅರ್ಥಮಾಡಿಕೊಂಡು, ಅದರ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವುದು ಇಂದಿನ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ವಿಭಾಗದ ಉಪನಿರ್ದೇಶಕಿ ರಾಜೇಶ್ವರಿ, ಕರ್ನಾಟಕ ರಾಜ್ಯ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಜಯಾನಂದ ಸುವರ್ಣ, ಕರ್ನಾಟಕ ರಾಜ್ಯ ಉಪನ್ಯಾಸಕರ ಸಂಘದ ಜೊತೆ ಕಾರ್ಯದರ್ಶಿ ವಿಠಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕ ಡಾ. ಅರುಣ್ ಪ್ರಕಾಶ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಅರ್ಥಶಾಸ್ತ್ರ ಬೋಧನೆ ಹಾಗೂ ಆಧುನಿಕ ಬೆಳವಣಿಗೆಗಳ ಕುರಿತು ಉಪನ್ಯಾಸಕರಿಗೆ ಉಪಯುಕ್ತ ಮಾಹಿತಿ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments