ಕೊರೋನ ಹೆಚ್ಚಳ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿದೆ.



ದಿನಸಿ, ತರಕಾರಿ, ಮಾಂಸ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು, ಬೀದಿ ಬದಿ ವ್ಯಾಪಾರಕ್ಕೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆದರೆ ಗ್ರಾಹಕರ ಸಂಖ್ಯೆ ವಿರಳವಾಗಿದೆ. ಅಗತ್ಯ ವಸ್ತುಗಳ ಸಾಗಾಟದ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಆಟೊ ರಿಕ್ಷಾಗಳು ಓಡಾಡುತ್ತಿವೆ.ಬೆಳಗ್ಗೆ ಹೊತ್ತು ಬೆರಳೆಣಿಕೆಯಷ್ಟು ನರ್ಮ್ ಬಸ್ , ಖಾಸಗಿ, ಸಿಟಿ ಬಸ್ ಗಳು ರಸ್ತೆಗಿಳಿದೆ
