HomeFresh Newsಮಂಗಳೂರಿನ ಬೆಂಗ್ರೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ

ಮಂಗಳೂರಿನ ಬೆಂಗ್ರೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ

ಮಂಗಳೂರಿನ ಬೆಂಗ್ರೆ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮೀನುಗಳು ಸಾವನ್ನಪ್ಪಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ಮಂಗಳೂರಿನ ಬೆಂಗ್ರೆಯಲ್ಲಿ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ ನಡೆದಿದೆ. ನೀರಿನ ಮೇಲ್ಮೈಯಲ್ಲಿ ನೂರಾರು ಮೀನುಗಳು ಸತ್ತು ತೇಲಿಬಂದಿವೆ.

ಈ ಹಠಾತ್ ಘಟನೆಯಿಂದಾಗಿ ಇಡೀ ಬೆಂಗ್ರೆ ಪ್ರದೇಶದಲ್ಲಿ ಸದ್ಯ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯ ನಿವಾಸಿಗಳು ಮತ್ತು ಮೀನುಗಾರರು ಈ ದೃಶ್ಯವನ್ನು ಕಂಡು ಕಂಗಾಲಾಗಿದ್ದಾರೆ.


ಪ್ರಾಥಮಿಕ ಮಾಹಿತಿಯ ಪ್ರಕಾರ, ನೀರಿನ ಮಾಲಿನ್ಯ ಅಥವಾ ನೀರಿನಲ್ಲಿ ಆಮ್ಲಜನಕದ ಕೊರತೆಯೇ ಈ ಮೀನುಗಳ ಸಾಮೂಹಿಕ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಗಂಭೀರತೆಯನ್ನು ಅರಿತ ಸ್ಥಳೀಯ ನಿವಾಸಿಗಳು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರನ್ನು ನೀಡಿದ್ದಾರೆ.

ಸುಲ್ತಾನ್ ಬತ್ತೇರಿಯಿಂದ ತಣ್ಣೀರು ಬಾವಿ ಸೇತುವೆ ಕಾಮಗಾರಿಯಿಂದಾಗಿ ನದಿಯ ನೀರನ್ನು ತಡೆ ಮಾಡಿದ್ದರಿಂದ ಈ ರೀತಿಯ ಸಮಸ್ಯೆ ಆಗಿದೆ ಎಂಬುವುದು ಸ್ಥಳೀಯರ ಆರೋಪವಾಗಿದೆ..

ಸದ್ಯಕ್ಕೆ ಮೀನುಗಳ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಅಧಿಕಾರಿಗಳ ತನಿಖೆಯ ನಂತರವಷ್ಟೇ ನೈಜ ಕಾರಣ ಏನೆಂಬುದು ಬಹಿರಂಗವಾಗಲಿದೆ. ಈ ಕುರಿತು ಅಧಿಕಾರಿಗಳು ಯಾವ ರೀತಿಯ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments