ಮಂಗಳೂರು ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್
ಕೊರೊನಾ ವೈರಸ್ ಸೋಂಕಿಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತದೇಹದ ಕೊರೊನಾ ತಪಾಸಣಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ಆರಂಭಿಸಿದ್ದಾರೆ.

ಮಂಗಳೂರು ಹೊರವಲಯದ ಸುರತ್ಕಲ್ನ ಅಪಾರ್ಟ್ಮೆಂಟ್ನಲ್ಲಿ ರಮೇಶ್ ಹಾಗೂ ಗುಣಾ ದಂಪತಿ ಆತ್ಮಹತ್ಯೆ ಪ್ರಕರಣ ಆತಂಕವನ್ನು ಮೂಡಿಸಿತ್ತು. ಡೆತ್ನೋಟ್ ನಲ್ಲಿ ಕೊರೊನಾ ಹಾಗೂ ಬ್ಲ್ಯಾಕ್ ಫಂಗಸ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಮೃತದೇಹದ ಪರೀಕ್ಷೆಯನ್ನು ನಡೆಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

















