HomeFresh Newsಮಂಗಳೂರು: ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು: ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು: ಪತ್ರಕರ್ತ, ಕನ್ನಡ ಖಾಸಗಿ ನ್ಯೂಸ್ ಚಾನೆಲ್‍ನ ದ.ಕ ಜಿಲ್ಲಾ ವರದಿಗಾರನೋರ್ವನ ಮೇಲೆ ನಿನ್ನೆ ಸಂಜೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ನ್ಯೂಸ್ ಚಾನೆಲ್‍ನ ದ.ಕ ಜಿಲ್ಲಾ ವರದಿಗಾರ ಸುಖ್‍ಪಾಲ್ ಪೊಳಲಿ ಹಲ್ಲೆಗೊಳಗಾದ ಪತ್ರಕರ್ತ. ನಿನ್ನೆ ಸಂಜೆ ವ್ಯಕ್ತಿಯೊಬ್ಬ ಏಕಾಏಕಿ ಬಂದು ಸುಖ್‍ಪಾಲ್ ಪೊಳಲಿ ಮೇಲೆ ಮಾರಾಕಾಯುಧದಿಂದ ತಲೆಯ ಭಾಗಕ್ಕೆ ಹಲ್ಲೆ ನಡೆಸಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆ ನಡೆಸಿದ ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ.
ವೈಯಕ್ತಿಕ ವಿಚಾರದ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.ಹಲ್ಲೆಗೊಳಗಾದ ಸುಖ್‍ಪಾಲ್ ಪೊಳಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉರ್ವ ಠಾಣೆಯಲ್ಲಿ ಐಪಿಸಿ 307ರ ಪ್ರಕಾರ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ 324, 341 ಐಪಿಸಿ ಅಡಿಯಲ್ಲಿ ಪ್ರತಿ ದೂರು ಸಹ ದಾಖಲಿಸಲಾಗಿದೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments