HomeFresh Newsಮತಪತ್ರಗಳ ವಿಂಗಡೆ ಕಾರ್ಯ ಪೂರ್ಣ : ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ

ಮತಪತ್ರಗಳ ವಿಂಗಡೆ ಕಾರ್ಯ ಪೂರ್ಣ : ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ

ಮಂಗಳೂರಿನ ರೊಸಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂನ್ನು ತೆರೆಯಲಾಯಿತು. ಬಳಿಕ ಮತಪತ್ರಗಳ ವಿಂಗಡನೆ ಮಾಡಲಾಯಿತು. 10:45ರ ಸುಮಾರಿಗೆ ಮತ ವಿಂಗಡನೆ ಕಾರ್ಯ ಪೂರ್ಣಗೊಂಡಿದ್ದು, ಕೆಲಹೊತ್ತಿನಲ್ಲಿ ಮತ ಎಣಿಕೆಗೆ ಚಾಲನೆ ಸಿಗಲಿದೆ.

ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ ದ್ವಿ ಸದಸ್ಯತ್ವ ಸ್ಥಾನಕ್ಕೆ ಡಿ.10ರಂದು ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.

ಈ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಮತಪತ್ರಗಳ ವಿಂಗಡೆ ಕಾರ್ಯ ಪೂರ್ಣಗೊಂಡಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಕಾರ್ಯ ಆರಂಭಿಸಲಾಗುವುದು. 14 ಟೇಬಲ್ ಗಳಲ್ಲಿ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್. ದ.ಕ. ಜಿಪಂ ಸಿಇಒ ಡಾ.ಕುಮಾರ್ ಉಪಸ್ಥಿತರಿದ್ದಾರೆ.ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ ದ್ವಿ ಸದಸ್ಯತ್ವ ಸ್ಥಾನಕ್ಕೆ  ಡಿ.10ರಂದು ನಡೆದ ಚುನಾವಣೆಯಲ್ಲಿ ಶೇ. 99.55 ಮತದಾನವಾಗಿತ್ತು. ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಸಹಿತ ಉಭಯ ಜಿಲ್ಲೆಗಳ ಒಟ್ಟು 389 ಮತಗಟ್ಟೆಗಳಲ್ಲಿ ಒಟ್ಟು 6040 ಮತದಾರರಲ್ಲಿ  6013 ಮಂದಿ ಮತದಾನ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments