HomeFresh Newsಮಳೆಗೆ ಗುಡ್ಡ ಕುಸಿತ : ಮನೆ ಗೋಡೆ ಕುಸಿದು ಮಹಿಳೆಗೆ ಗಾಯ

ಮಳೆಗೆ ಗುಡ್ಡ ಕುಸಿತ : ಮನೆ ಗೋಡೆ ಕುಸಿದು ಮಹಿಳೆಗೆ ಗಾಯ

ಮಂಗಳೂರು : ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಬಿಡದೇ ಮಳೆ ಸುರಿದಿದೆ. ಇದರಿಂದ ಸೋಮವಾರ ಬೆಳಗ್ಗೆ 5.30ರ ವೇಳೆಗೆ ಮಂಗಳೂರು ಹೊರವಲಯದಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬುವವರ ಮನೆಯ ಹಿಂಭಾಗವಿದ್ದ ಭಾರೀ ಗಾತ್ರದ ಗುಡ್ಡ ಮನೆಯ ಮೇಲೆ ಕುಸಿದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯವಾಗಿದೆ.ಘಟನೆಯಿಂದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. malluru gudda kusithaಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು ಗುರುತಿಸಲಾಗಿದೆ. ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಬಿಡದೇ ಮಳೆ ಸುರಿದಿದೆ. ಇದರಿಂದ ಸೋಮವಾರ ಬೆಳಗ್ಗೆ 5.30ರ ವೇಳೆಗೆ ಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬುವವರ ಮನೆಯ ಹಿಂಭಾಗವಿದ್ದ ಭಾರೀ ಗಾತ್ರದ ಗುಡ್ಡ ಕುಸಿದು ಬಿದ್ದಿದೆ.ಇದರಿಂದ ಮನೆಯ ಗೋಡೆ ಕುಸಿದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರ ಕಣ್ಣಿನ ಭಾಗಕ್ಕೆ ಗಾಯವಾಗಿದೆ. malluru gudda kusithaಮನೆಯಲ್ಲಿ ಒಬ್ಬರೇ ಇದ್ದ ಕಾರಣ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಝುಬೇರ್ ಕುಟುಂಬ ಇದೇ ಮನೆಯಲ್ಲಿ ವಾಸವಿದ್ದರು. ಭಾನುವಾರ ಅವರ ಕುಟುಂಬ ಪತ್ನಿ ಮನೆಗೆ ತೆರಳಿತ್ತು. ಇಲ್ಲದಿದ್ದರೆ ಗೋಡೆ ಕುಸಿತದಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments