HomeFresh Newsಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಚಿನ್ನದ ಸರ ಸುಲಿಗೆ

ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಚಿನ್ನದ ಸರ ಸುಲಿಗೆ

ನಗರದ ನಂತೂರು ಪದವು ಬಳಿ ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರವನ್ನು ಸುಲಿಗೆಗೈದ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ನ 29 ರ ಸೋಮವಾರ ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಅಗ್ರಹಾರದ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ ಯಾನೆ ಅನಾಮಿಕ (27) ಬಂಧಿತ ಆರೋಪಿಯಾಗಿದ್ದಾನೆ. ಗಣೇಶ್ ಶೆಟ್ಟಿ ಎಂಬವರು ಎರಡು ತಿಂಗಳ ಹಿಂದೆ ತನ್ನ ಬೈಕ್‌ನಲ್ಲಿ ನಂತೂರು ಪದವಿನಿಂದ ಬಿಎಸ್‌ಎನ್‌ಎಲ್ ಎಕ್ಸೇಂಜ್ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದಾಗ ಹಠಾತ್ ಆಗಿ ಅಡ್ಡ ಬಂದ ಮಂಗಳಮುಖಿ ಗಣೇಶ್ ಶೆಟ್ಟಿಯ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ 24 ಗ್ರಾಂ ತೂಕದ ಚಿನ್ನದ ಸರ ಸುಲಿಗೆ ಮಾಡಿದ್ದ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದೊಂದಿಗೆ ಪೊಲೀಸರು ಮೂರು ಸರಗಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಬಂಧಿಸಲ್ಪಟ್ಟ ಮಂಗಳಮುಖಿಯಿಂದ ಸುಮಾರು 71 ಗ್ರಾಂ ತೂಕದ ಮೂರು ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments