HomeFresh Newsರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ : ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ : ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ–2026ರಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ವಿವಿಧ ತಂಡ ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ಪದಕಗಳನ್ನು ಗೆದ್ದಿದೆ.

ಪುರುಷರ ವಿಭಾಗದ ಕಬಡ್ಡಿಯಲ್ಲಿ ಆಳ್ವಾಸ್ ತಂಡ ಪ್ರಥಮ ಸ್ಥಾನ ಗಳಿಸಿದರೆ, ಬಾಲ್‌ಬ್ಯಾಡ್ಮಿಂಟನ್ ಮತ್ತು ಖೋ ಖೋ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಮಹಿಳೆಯರ ವಿಭಾಗದಲ್ಲಿ ಕಬಡ್ಡಿ ಹಾಗೂ ಬಾಲ್‌ಬ್ಯಾಡ್ಮಿಂಟನ್ ಎರಡೂ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದೆ.
ಅಥ್ಲೆಟಿಕ್ಸ್‌ನಲ್ಲಿ ಆಳ್ವಾಸ್ ಕ್ರೀಡಾಪಟುಗಳು 4 ಚಿನ್ನ, 6 ಬೆಳ್ಳಿ ಹಾಗೂ 5 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ವೇಟ್‌ಲಿಫ್ಟಿಂಗ್‌ನಲ್ಲಿ 6 ಚಿನ್ನ, 6 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಯೋಗ ಸ್ಪರ್ಧೆಯಲ್ಲಿ 4 ಚಿನ್ನ ಮತ್ತು 2 ಬೆಳ್ಳಿ ಪದಕಗಳನ್ನು ಗಳಿಸಿದರೆ, ಕುಸ್ತಿ ಪಂದ್ಯಾವಳಿಯಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 4 ಕಂಚಿನ ಪದಕಗಳನ್ನು ಜಯಿಸಿದ್ದಾರೆ.
ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments