ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ(67) ಚಿಕಿತ್ಸೆ ಫಲಕಾರಿಯಾಗದೇ, ಸಾವನ್ನಪ್ಪಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಕೊಂಡಿ ಕಳಚಿದಂತೆ ಆಗಿದೆ.

ಮೇ 2ರಂದು ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಂತ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆಯಿಂದ ಕಳೆದ ಸೋಮವಾರದಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಪಡೆಯುತ್ತಿದ್ದರು. ಅವರು ಇಂದು ಚಿಕಿತ್ಸೆ ಫಲಕಾರಿಯಾಗೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಸಿದ್ಧಲಿಂಗಯ್ಯನವರು ಕನ್ನಡದ ಲೇಖಕರಲ್ಲೊಬ್ಬರು. ’ದಲಿತ ಕವಿ’ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದವರು.

ಸಿದ್ಧಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ’ಮಾಗಡಿ’ ತಾಲ್ಲೋಕಿನ ’ಮಂಚನಬೆಲೆ’ ಗ್ರಾಮದಲ್ಲಿ ೧೯೫೪ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

 

Related Posts

Leave a Reply

Your email address will not be published.