ಜುಲೈ 26ರಿಂದ ಪದವಿ ತರಗತಿ ಆರಂಭ: ಸಿನಿಮಾ ಮಂದಿರ ತೆರೆಯೋದಕ್ಕೆ ಅನುಮತಿ

ರಾಜ್ಯ ಸರ್ಕಾರದಿಂದ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಸಿನಿಮಾ ಮಂದಿರಗಳನ್ನು ತೆರೆಯೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅನ್ ಲಾಕ್ 4.0 ಮಾರ್ಗಸೂಚಿಯಂತೆ ಹಲವು ತಿಂಗಳ ಬಳಿಕ ನಾಳೆಯಿಂದ ಚಿತ್ರಮಂದಿರಗಳನ್ನು ತೆರೆದು, ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಿದೆ.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಅನ್ ಲಾಕ್ 4.0 ಮಾರ್ಗಸೂಚಿ ಕ್ರಮಗಳ ಜಾರಿ ಕುರಿತಂತೆ ಮಹತ್ವದ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಿನಿಮಾ ಥಿಯೇಟರ್ ಗಳನ್ನು ಶೇ.೫೦ರಷ್ಟು ಸೀಟುಗಳ ಭರ್ತಿಯೊಂದಿಗೆ ನಾಳೆಯಿಂದ ತೆರೆಯೋದಕ್ಕೆ ಅವಕಾಶ ನೀಡಿದೆ. ಅಲ್ಲದೇ ನಾಳೆಯಿಂದ ನೈಟ್ ಕರ್ಪ್ಯೂನಲ್ಲೂ ಬದಲಾವಣೆ ಮಾಡಲಾಗಿದ್ದು. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಿದೆ.

ಜುಲೈ 26ರಿಂದ ಪದವಿ ತರಗತಿಗಳನ್ನು ತೆರೆಯೋದಕ್ಕೂ ಅವಕಾಶ ನೀಡಲಾಗಿದೆ. ಕಾಲೇಜು ತರಗತಿಗಳಿಗೆ ಹಾಜರಾಗುವಂತ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಪಡೆಯೋದು ಕಡ್ಡಾಯಗೊಳಿಸಿದೆ. ಈ ಮೂಲಕ ರಾಜ್ಯದಲ್ಲಿ ಪದವಿ ಕಾಲೇಜು, ಸಿನಿಮಾ ಮಂದಿರಗಳನ್ನು ತೆರೆಯೋದಕ್ಕೆ ಇಂದಿನ ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

 

Related Posts

Leave a Reply

Your email address will not be published.