ಪರಿಸರ ಸಂರಕ್ಷಣೆ ಸಂದೇಶದೊಂದಿಗೆ ರಕ್ಷಾ ಬಂಧನ ಆಚರಿಸಿದ ಮಾಜಿ ಸಚಿವ ಎಂ.ಬಿ ಪಾಟೀಲ್

ರಾಜ್ಯದ ಹಲವೆಡೆ ಇಂದು ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹಬ್ಬ ಎಂದೇ ಖ್ಯಾತಿ ಪಡೆದಿರುವ ರಕ್ಷಾ ಬಂಧನ ಆಚರಿಸಲಾಗುತ್ತಿದೆ. ರಕ್ಷಾ ಬಂಧನವು ನೂಲು ಹುಣ್ಣಿಮೆ ದಿನದಂದು ಪ್ರತಿ ವರ್ಷ ನಡೆಯುವ ಹಬ್ಬದಲ್ಲಿ ಅಣ್ಣ ತಂಗಿಗೆ ನೂಲಿನ ರೂಪದಲ್ಲಿ ದಾರ, ರಾಖಿ ಕಟ್ಟುವುದು ಸಂಪ್ರದಾಯ. ಆದರೆ ಮಾಜೀ ಗೃಹ ಸಚಿವರಾದ ಎಂ.ಬಿ ಪಾಟೀಲ್ ಈ ಬಾರಿ ವಿಶಿಷ್ಟ ರೀತಿಯಲ್ಲಿ ರಕ್ಷಾ ಬಂಧನ ಆಚರಿಸಿ ಗಮನಸೆಳೆದಿದ್ದಾರೆ.

ಕೋಟಿ ವೃಕ್ಷ ಅಭಿಯಾನವನ್ನು ಯಶಸ್ವಿಯಾಗಿ ಪೂರೈಸಿ ಆ ಮೂಲಕ ಪರಿಸರದ ಜಾಗೃತಿ ಮೂಡಿಸಿರುವ ಮಾಜೀ ಸಚಿವರು ಈ ಬಾರಿ ಗಿಡ ಮರಗಳಿಗೂ ರಾಖಿ ಕಟ್ಟಿ ಅವುಗಳನ್ನೂ ರಕ್ಷಣೆ ಮಾಡಬೇಕು ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದಾರೆ.

ಇಂದು ಸ್ವತಃ ಮರದ ಕೊಂಬೆಗೆ ರಾಖಿ ಕಟ್ಟಿ, “ಅಕ್ಕ ತಂಗಿಯರು ತಮ್ಮ ಅಣ್ಣ ತಮ್ಮಂದಿರಿಗೆ ತಮ್ಮ ರಕ್ಷಣೆಗಾಗಿ ಹಾಗೂ ಉತ್ತಮ ಬಾಂಧವ್ಯ ಬೆಳೆಸುವ ಉದ್ದೇಶದಿಂದ ರಾಖಿ ಕಟ್ಟಿ ಹಬ್ಬ ಆಚರಿಸುತ್ತಾರೆ. ಅದೇ ರೀತಿ ನಾವು ಮಕ್ಕಳಲ್ಲಿ, ಯುವಜನರಲ್ಲಿ, ನಾಗರಿಕರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿ ಗಿಡ-ಮರಗಳಿಗೆ ರಕ್ಷಾಬಂಧನ ಮಾಡಿಸುವ ಮೂಲಕ ಅವುಗಳ ರಕ್ಷಣೆ ಮಾಡಬೇಕು” ಎನ್ನುವ ಮೂಲಕ ಮಾದರಿ ರೀತಿಯಲ್ಲಿ ಆಚರಣೆ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಗೆ ಪಾತ್ರವಾಯಿತು.‌ ಮುಂದಿನ ದಿನಗಳಲ್ಲಿ ಇದನ್ನು ಪರಿಸರ ಸಂರಕ್ಷಣೆಗೆ ಅಭಿಯಾನದ ರೀತಿಯಲ್ಲಿ ವ್ಯವಸ್ಥಿತವಾಗಿ ಆಚರಿಸಬಹುದು ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

Related Posts

Leave a Reply

Your email address will not be published.