ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್‍ನಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ
ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಹೇಳಿದರು.

ಅವರು ಸುರತ್ಕಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಡ್ಯಾ ಶ್ರೀ ಮಹಾಲಿಂಗೇಶ್ವರದ ದೇವಸ್ಥಾನದ ಪ್ರಧಾನ ಅರ್ಚಕರು ಮತ್ತು ಅನುವಂಶಿಕ ಆಡಳಿತ ಮುಕ್ತೇಸರರಾದ ವೇದಮೂರ್ತಿ ಐ ರಮಾನಂದ ಭಟ್ ಅವರು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಒಎಮ್‍ಪಿಎಲ್‍ನ ಸಿಇಒ ಎಸ್.ಎಸ್. ನಾಯಕ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾರ್ಗಿಲ್ ವಾರ್ ಮೆಡಲ್ ಪುರಸ್ಕøತರು ಅಪರೇಷನ್ ವಿಜಯ್ ಮತ್ತು ಅಪರೇಶನ್ ವಿಜಯ್ ಸ್ಟಾರ್‍ನಲ್ಲಿ ಮುಂಚೂಣಿಯಲ್ಲಿ ಭಾಗವಹಿಸಿದ್ದ ನಾಯಕ್ ಪ್ರವೀಣ್ ಕುಮಾರ್ ಶೆಟ್ಟಿ, ಪಿಲಾರ್ ಮೇಗಿನಮನೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರತಿ ವರ್ಷದಂತೆ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ನಡೆಯಲಿದ್ದು, ಭಾರತ ಮಾತಾ ಪೂಜನ, ವೀರ ಸೈನಿಕರಿಗೆ ಗೌರವಾರ್ಪಣೆ, ಎಲ್ಲಾ ಹುತಾತ್ಮ ಸೈನಿಕರಿಗೆ ಶ್ರದ್ದಾಂಜಲಿ, ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ನಡೆಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮಹೇಶ್ ಮೂರ್ತಿ, ಗೌರವಾಧ್ಯಕಷರಾದ ಕಡಂಬೋಡಿ ಮಹಾಬಲ ಪೂಜಾರಿ, ಯಶ್‍ಪಾಲ್ ಸಾಲ್ಯಾನ್ ಚಿತ್ರಾಪುರ, ಲೋಕೇಶ್ ಉಪಸ್ಥಿತರಿದ್ದರು.


















