ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರಬಾಯಿ ಪಟೇಲ್ ಪ್ರಮಾಣವಚನ

ಭೋಪಾಲ್: ಭೂಪೇಂದ್ರಬಾಯ್ ಪಟೇಲ್  ಸೋಮವಾರ ಮಧ್ಯಾಹ್ನ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲರಾದ ಆಚಾರ್ಯ ದೇವವ್ರತ ಅವರು ಪ್ರಮಾಣವಚನ ಬೋಧಿಸಿದರು.

ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷವು ಅವರನ್ನು ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಿತು. ರಾಜ್ಯ ವಿಧಾನಸಭೆಯಲ್ಲಿ ಒಟ್ಟು 182 ಸ್ಥಾನಗಳನ್ನು ಹೊಂದಿದ್ದು, ಬಿಜೆಪಿ 112 ಸದಸ್ಯರನ್ನು ಹೊಂದಿದೆ. ಅವರೆಲ್ಲ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು. ಶನಿವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಜಯ್ ರೂಪಾನಿ, ಭೂಪೇಂದ್ರ ಪಟೇಲ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಿದರು. ಇದಕ್ಕೆ ಎಲ್ಲ ಬಿಜೆಪಿ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು. ಭೂಪೇಂದ್ರ ಬಾಯ್ ಪಟೇಲ್ 2017 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.ಭೂಪೆಂದ್ರ ಅವರು 2017 ರ ವಿಧಾನಸಭಾ ಚುನಾವಣೆಯಲ್ಲಿ ಘಾಟ್ಲೋಡಿಯಾ ಕ್ಷೇತ್ರದಿಂದ ಗೆದ್ದಿದ್ದಾರೆ. ಈ ಹಿಂದೆ ಉತ್ತರ ಪ್ರದೇಶದ ಹಾಲಿ ರಾಜ್ಯಪಾಲರಾದ ಆನಂದಿಬೆನ್ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

Related Posts

Leave a Reply

Your email address will not be published.