Homeಕರಾವಳಿವಿಟ್ಲದಲ್ಲಿ ಕಾಲೇಜ್ ಬಸ್ ಮತ್ತು ಬೈಕ್ ನಡುವೆ ಅಪಘಾತ

ವಿಟ್ಲದಲ್ಲಿ ಕಾಲೇಜ್ ಬಸ್ ಮತ್ತು ಬೈಕ್ ನಡುವೆ ಅಪಘಾತ

ವಿಟ್ಲ: ಮಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿಗಳು ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿದೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ಮೂವರು ಸ್ಟಾಪ್ ನರ್ಸ್ ಮತ್ತು ಬೈಕ್ ಸವಾರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಎಲ್ಲರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್ ಸವಾರ ಇರಂದೂರು ಪಡೀಲ್ ನಿವಾಸಿ ಜಾಕೀರ್ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರಗೆ ಬಸ್ ರಸ್ತೆ ಬದಿಯ ಮರದ ಬುಡದಲ್ಲಿ ಸಿಕ್ಕಿಹಾಕಿಕೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಪಕ್ಕದಲ್ಲಿ ಪ್ರಪಾತ ಇದ್ದು, ಮಹಿಳೆಯೊಬ್ಬರು ಕೆಳಗಡೆ ಉರುಳಿ ಬಿದ್ದಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments