HomeUncategorizedವಿಟ್ಲ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ವಿಟ್ಲ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ವಿಟ್ಲ: ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ವತಿಯಿಂದ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಮಂಚಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ಕಾರ್ಯದರ್ಶಿ ಕಬೀರ್ ಮಂಚಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಲಾಯಿತು. ಮಂಚಿ ಪಂಚಾಯತ್ ಮುಂಭಾಗದಲ್ಲಿ ಓಲೆ ಉರಿಸಿ ಆಕ್ರೋಶ ವ್ಯಕ್ತಪಡಿಸಿಲಾಯಿತು.

ಪ್ರತಿಭಟನೆ ಸಭೆಯಲ್ಲಿ ಎಸ್‍ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಯಾದ ಆಶ್ರಫ್ ಮಂಚಿ ಮಾತನಾಡಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಹಾಗೂ ತೈಲ ಬೆಲೆ ಏರಿಕೆಗೆ ಬಿಜೆಪಿ ಖಾಸಗೀಕರಣಕ್ಕೆ ಹೆಚ್ಚು ಹೊತ್ತು ನೀಡುತ್ತಿರುವುದೇ ಮುಖ್ಯ ಕಾರಣ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯರಾದ ಫೈಝಲ್ ಮಂಚಿ ಸಾಮಾಜಿಕ ಕಾರ್ಯಕರ್ತ ಹನೀಫ್ ನಿರ್ಬೈಲು, ನಿಸಾರ್ ಕುಕ್ಕಾಜೆ ಉಪಸ್ಥಿತರಿದ್ದರು

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments