HomeFresh Newsವಿದ್ಯಾರ್ಥಿಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಕ್ರಿಯಾ ಯೋಜನೆ ರೂಪಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ವಿದ್ಯಾರ್ಥಿಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಕ್ರಿಯಾ ಯೋಜನೆ ರೂಪಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಮಕ್ಕಳು ಕೋವಿಡ್ -19 ಸೋಂಕಿನಿಂದ ಬಾಧಿತರಾಗದಂತೆ ಖಾತ್ರಿಪಡಿಸಿಕೊಳ್ಳುವ ಸಲುವಾಗಿ ಅವರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕ್ರಿಯಾಯೋಜನೆ ರೂಪಿಸುವಂತೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.
ಮಾಧ್ಯಮ ಪ್ರಕಟಣೆಯಲ್ಲಿ ಅವರು, ಶಾಲೆ ಮತ್ತು ಕಾಲೇಜುಗಳನ್ನು ತೆರೆಯುವ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾದುದಾಗಿದೆ. ಆದರೆ ಮಕ್ಕಳಲ್ಲಿ ಕೋವಿಡ್ -19 ಸಾಂಕ್ರಾಮಿಕವನ್ನು ನಿಗ್ರಹಿಸುವ ರೋಗನಿರೋಧಕ ಶಕ್ತಿ ಇದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದೂ ಅಷ್ಟೇ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.
“ಈ ಕ್ರಿಯಾ ಯೋಜನೆ ನಿಖರವಾಗಿರಬೇಕು ಮತ್ತು ಸಮಗ್ರವಾಗಿರಬೇಕು ಇದರಿಂದ ಸಂಪೂರ್ಣ ವಿದ್ಯಾರ್ಥಿ- ಸಮೂಹ ಆದಷ್ಟು ಶೀಘ್ರ ಈ ವ್ಯಾಪ್ತಿಗೆ ಒಳಪಡಬೇಕು. ಸೋಂಕಿಗೆ ನಾವು ಯಾವುದೇ ಅವಕಾಶವನ್ನೂ ನೀಡುವಂತಿರಬಾರದು. ರೋಗನಿರೋಧಕ ಶಕ್ತಿಯನ್ನು ಬೆಳೆಸಲು ಈ ಅಭಿಯಾನದಲ್ಲಿ ಲೋಪದೋಷಗಳಿಗೂ ಯಾವುದೇ ಅವಕಾಶವಿರಬಾರದು “ಎಂದು ಶ್ರೀ ಕಾಗೇರಿ ಅಭಿಪ್ರಾಯಪಟ್ಟಿದ್ದಾರೆ.
ಸ್ಪೀಕರ್ ಶ್ರೀ ಕಾಗೇರಿ ಅವರು ಈ ಹಿಂದೆ 2008ರಿಂದ 2013ರವರೆಗೆ ರಾಜ್ಯದ ಶಿಕ್ಷಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು ಎಂಬುದು ಇಲ್ಲಿ ಉಲ್ಲೇಖನಾರ್ಹವಾಗಿದೆ.ಶಾಲೆಗಳಲ್ಲಿ ಕೋವಿಡ್ ಸಂಬಂಧಿತ ಗುಣಮಟ್ಟದ ಕಾರ್ಯಾಚರಣೆ ವಿಧಾನಗಳು –ಎಸ್.ಓ.ಪಿ. ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಹಠಾತ್ ಭೇಟಿ ನೀಡುವ ಸಲುವಾಗಿ ಸರ್ಕಾರ ಒಂದು ತಂಡವನ್ನು ನಿಯೋಜಿಸಬೇಕು ಎಂದೂ ಶ್ರೀ ಕಾಗೇರಿ ಅವರು ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.
“ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ವರ್ಧಿಸುವ ಅಗತ್ಯದ ಕುರಿತಂತೆ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿ ಮಿಗಿಲಾಗಿ ಪಾಲಕರಲ್ಲಿ ಜಾಗೃತಿ ಮೂಡಿಸುವುದು ಮಹತ್ವದ್ದಾಗಿದೆ,” ಎಂದು ಸ್ಪೀಕರ್ ಪ್ರತಿಪಾದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments