HomeFresh Newsಶ್ರೀಗಂಧದ ಮರ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಶ್ರೀಗಂಧದ ಮರ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ರಕ್ಷಿತಾರಣ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಶ್ರೀಗಂಧದ ಮರಗಳನ್ನು ಕಳವು ಮಾಡಿ ಮಾರಾಟ ಮಾಡಲು ಯತ್ನಿಸಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ವಲಯ ಅರಣಾಧಿಕಾರಿಗಳು ಬಂಧಿಸಿದ್ದು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪಾತೂರು ನಿವಾಸಿ ಇಬ್ರಾಹಿಂ ಹಾಗೂ ಇರಾ ಗ್ರಾಮದ ಮೊಯ್ದೀನ್ ಬಂಧಿತ ಆರೋಪಿಗಳು.

ಸಿದ್ದೀಕ್ ಹಾಗೂ ಕೊರುಂಗು ಸಿದ್ದೀಕ್ ಸದ್ಯ ತಲೆಮರೆಸಿಕೊಂಡಿದ್ದಾರೆ. ವೀರಕಂಬ ರಕ್ಷಿತಾರಣ್ಯದಿಂದ ಲಕ್ಷಾಂತರ ರೂಪಾಯಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿದು ಸಾಗಿಸುವ ಪ್ರಯತ್ನದಲ್ಲಿದ್ದಾಗ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಚರಣೆ ನಡಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂದರ್ಭ ಕಾಡು ಪ್ರಾಣಿಯಾದ ಉಡವನ್ನು ಹಿಡಿದು ಭಕ್ಷಿಸಲು ತಯಾರಿ ನಡೆಸಿದ್ದು ಅರಣ್ಯಾಧಿಕಾರಿಗಳ ಸಕಾಲಿಕ ಕಾರ್ಯಚರಣೆಯಿಂದ ಉಡವನ್ನು ರಕ್ಷಿಸಲಾಗಿದೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments