HomeFresh Newsಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ ನಿಧನ

ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ ನಿಧನ

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ, ಸಂಘಟಕ, ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. 
ಮೃತರು ತಾಯಿ, ಪತ್ನಿ, ಒಂದು ಹೆಣ್ಣು, ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ. ಮುಂಗಾರು, ಮಂಗಳೂರು ಮಿತ್ರ, ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ವಿವಿಧ ಪತ್ರಿಕೆಗಳಿಗೆ ಲೇಖನವನ್ನು ಬರೆಯುತ್ತಿದ್ದರು. ಅವರ ಬಂಧುವಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿವಂಗತ ಡಾ.ಅಮ್ಮೆಂಬಳ ಬಾಳಪ್ಪ ಅವರ ಜೀವನಚರಿತ್ರೆಯ ಪುಸ್ತಕ ಸೇರಿದಂತೆ ಒಟ್ಟು 4 ಕೃತಿಗಳನ್ನು ಬರೆದಿದ್ದರು. ಲೇಖರಲ್ಲದೆ ಉತ್ತಮ ಭಾಷಣಕಾರರು ಆಗಿದ್ದರು. ಉಜಿರೆಯಲ್ಲಿ ನಡೆದ ವಿಶ್ವ ತುಳು ಸಾಹಿತ್ಯ ಸಮ್ಮೇಳನದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಅವರನ್ನು ಡಾ.ಹೆಗ್ಗಡೆಯವರು ಪುರಸ್ಕರಿಸಿದ್ದಲ್ಲದೆ ಹಲವಾರು ಸನ್ಮಾನಕ್ಕು ಪಾತ್ರರಾಗಿದ್ದರು. ಈಚೆಗಷ್ಟೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಅವರ ನಿವಾಸದಲ್ಲಿಯೇ ಚಾವಡಿ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ರು. ಬಂಟ್ವಾಳ ತಾಲೂಕು ಕುಲಾಲ ಸಮಾಜ ಸುಧಾರಕ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಆರಂಭದಲ್ಲಿ ಮಾಣಿಲ ಶ್ರೀಧಾಮದ ಸೇವಾ ಸಮಿತಿಯಲ್ಲೂ ಸಕ್ರೀಯವಾಗಿದ್ದರು. ಕುಲಾಲ ಮಠ ಕುಂಭೋಧರಿ ದೇವಿ ಟ್ರಸ್ಟ್ ನ ಸ್ಥಾಪಕರು ಆಗಿದ್ದರಲ್ಲದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಕೆಲ ಸಮಯಗಳ ಕಾಲ ಗುರುತಿಸಿಕೊಂಡಿದ್ದರು.ತುಳು ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿಯವರ ನಿಕಟವರ್ತಿಯಾಗಿದ್ದ ಡಿ.ಎಂ. ಕುಲಾಲ್ ಅವರು, ಭಂಡಾರಿ ಅವರು ಅಕಾಡೆಮಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಧ್ಯಕ್ಷರಿಗೆ ಸಹಾಯಕರಾಗಿಯೂ ಕಾರ್ಯನಿರ್ವಹಿಸಿದ್ದರು.

ಸಂತಾಪ: ಡಿ.ಎಂ.ಕುಲಾಲ್ ಅವರ ನಿಧನಕ್ಕೆ ಶಾಸಕ ರಾಜೇಶ್ ನಾಕ್ ಉಳಿಪಾಡಿ, ಮಾಜಿ ಸಚಿವ ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ತುಳುಕೂಟ ಅಧ್ಯಕ್ಷ ಸುದರ್ಶನ್ ಜೈನ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೆ.ಪೂಂಜಾ, ಬಂಟ್ವಾಳ ತಾಲೂಕು ಕುಲಾಲ ಸಮಾಜ ಸುಧಾರಕ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments