HomeFresh Newsಸೈಬರ್ ಅಪರಾಧಗಳ ಜಾಗೃತಿ ಕಾರ್ಯಕ್ರಮ, ಮಾದಕ ವಸ್ತುಗಳ ಕುರಿತು ಮಾಹಿತಿ ಕಾರ್ಯಾಗಾರ

ಸೈಬರ್ ಅಪರಾಧಗಳ ಜಾಗೃತಿ ಕಾರ್ಯಕ್ರಮ, ಮಾದಕ ವಸ್ತುಗಳ ಕುರಿತು ಮಾಹಿತಿ ಕಾರ್ಯಾಗಾರ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಘಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಸೈಬರ್ ಅಪರಾಧ ಪೊಲೀಸ್ ಠಾಣೆ ಹಾಗೂ ಸಿಐಪಿ-ಐಆರ್ ಸಿಎ, ಫಾದರ್ ಪತ್ರಾವೊ ಆಸ್ಪತ್ರೆ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆ ಸೈಬರ್ ಅಪರಾಧಗಳ ಜಾಗೃತಿ ಕಾರ್ಯಕ್ರಮ ಮತ್ತು ಮಾದಕ ವಸ್ತುಗಳ ಕುರಿತು ಮಾಹಿತಿ ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.


ಸಂಪನ್ಮೂಲ ವ್ಯಕ್ತಿಗಳಾಗಿ ಪುತ್ತೂರಿನ ಫಾ. ಪತ್ರಾವೋ ಆಸ್ಪತ್ರೆಯ ಸಿಐಪಿ ಯೋಜನೆಯ ಕೌನ್ಸಿಲರ್ ಝೀಟಾ ಮಾತನಾಡಿ, ಕೇಂದ್ರ ಸರಕಾರ 2020ನೇ ಇಸವಿಯಿಂದ, ಪ್ರತಿವರ್ಷ ಜೂನ್ ತಿಂಗಳಲ್ಲಿ ನಶಾ ಮುಕ್ತ ಅಭಿಯಾನವನ್ನು ಆಯೋಜಿಸುತ್ತಿದ್ದು, ಯುವಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ಪದಾರ್ಥಗಳ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶ. ಯುವ ಸಮಾಜ ಇಂದು ಬೇರೆ ಬೇರೆ ಕಾರಣಗಳಿಗಾಗಿ ಮಾದಕ ವಸ್ತುಗಳ ಬಗ್ಗೆ ಆಸಕ್ತಿಯನ್ನು ಹೊಂದಿದ್ದು, ಮುಖ್ಯವಾಗಿ ಯುವಕರು ಮಾದಕ ವಸ್ತುಗಳನ್ನು, ಮೋಜಿಗಾಗಿ, ಖಿನ್ನತೆಯಿಂದ ಹೊರಬರಲು, ವಿಶ್ರಾಂತಿಗಾಗಿ ಹಾಗೆಯೇ ನೋವು ನಿವಾರಣೆಗಾಗಿ ಉಪಯೋಗಿಸುತ್ತಾರೆ. ಆದರೆ ಈ ಮಾದಕ ವ್ಯಸನವು ಹಲವಾರು ದುಷ್ಪರಿಣಾಮಗಳಿಗೆ ಕಾರಣವಾಗಿದ್ದು, ಯುವಕರು ನೆನಪಿನ ಶಕ್ತಿ, ಹಾಗೆಯೇ ರೋಗ ನಿರೋಧಕ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಮಾದಕ ವ್ಯಸನವೂ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರುವುದಷ್ಟೇ ಅಲ್ಲದೆ, ಕಾನೂನಾತ್ಮಕವಾಗಿ ಕೂಡ ಕಠಿಣ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು.


ಮಂಗಳೂರು ಸೈಬರ್ ಅಪರಾಧ ವಿಭಾಗದ ಪೊಲೀಸ್ ಉಪನಿರೀಕ್ಷಕರಾದ ಉದಯ ರವಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಸಮಾಜಿಕ ಜಾಲತಾಣಗಳ ಉಪಯೋಗದಿಂದಾಗಿ ಹಲವಾರು ಹೊಸ ಹೊಸ ಅಪರಾಧಗಳು ಮುನ್ನಲೆಗೆ ಬಂದಿದ್ದು, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಉಪಯೋಗದಲ್ಲಿ ಅತ್ಯಂತ ಜಾಗರೂಕರಾಗಿರಬೇಕು. ಸಮಾಜಿಕ ಮಾದ್ಯಮಗಳಲ್ಲಿ ಭಾವಚಿತ್ರಗಳನ್ನು ಅಪ್ಲೋಡ್ ಮಾಡುವಾಗ ಅತ್ಯಂತ ಜಾಗ್ರತೆಯನ್ನು ವಹಿಸಬೇಕು. ನಿಮ್ಮ ಭಾವಚಿತ್ರಗಳು ನಕಲಿ ಖಾತೆಗಳಿಗೆ ಉಪಯೋಗವಾಗಬಹುದು ಮತ್ತು ನಿಮ್ಮ ಹೆಸರುಗಳಲ್ಲಿ ಅಪರಾಧಗಳು ನಡೆಯಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಕಿವಿಮಾತು ಹೇಳಿದರು.

ಪೊಲೀಸ್ ಉಪನಿರೀಕ್ಷಕರಾದ ಸೇಸಮ್ಮ ಮಾತನಾಡಿ, ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಜಾಗರೂಕರಾಗಿ ಇರಬೇಕೆಂದು ತಿಳಿಸಿದರು. ಅಪರಿಚಿತ ವ್ಯಕ್ತಿಗಳಲ್ಲಿ ಮಾತನಾಡುವಾಗ ಜಾಗ್ರತೆ ವಹಿಸುವುದರ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ತಿಳಿಸಿದರು.


ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ,ಪುತ್ತೂರಿನ ಫಾ. ಪತ್ರಾವೋ ಆಸ್ಪತ್ರೆಯ ಸಿಐಪಿ ಯೋಜನೆಯ ನಿರ್ದೇಶಕರಾದ ಸಿಸ್ಟರ್ ಜಾನೆಟ್ ಕುಟಿನ್ಹ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

sudha add new -
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments