HomeFresh Newsಸೋಲಾರ್ ಪಂಪ್‌ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಕೇಂದ್ರ ಸಚಿವೆ ಶೋಭಾಗೆ ಪುತ್ತೂರು ಶಾಸಕ ಸಂಜೀವ ಮಠಂದೂರು...

ಸೋಲಾರ್ ಪಂಪ್‌ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಕೇಂದ್ರ ಸಚಿವೆ ಶೋಭಾಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮನವಿ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಆ.10ರಂದು ದೆಹಲಿಯಲ್ಲಿ ಕೇಂದ್ರದ ಕೃಷಿ ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತರ ಕನ್ನಡ ಜಿಲ್ಲೆಯ ಮಾದರಿಯಲ್ಲೇ ಸೋಲಾರ್ ಪಂಪ್ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಮನವಿ ಮಾಡಿದರು.

ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಲಾರ್ ಪಂಪ್‌ಸೆಟ್‌ಗಳನ್ನು ಅಳವಡಿಸುವಾಗ ಸರಕಾರ ಸಬ್ಸಿಡಿ ನೀಡುತ್ತಿದೆ. ಆ ಸಬ್ಸಿಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೂ ವಿಸ್ತರಿಸಬೇಕು ಮತ್ತು ಪುತ್ತೂರು ಎಪಿಎಂಸಿ ಅಂಡರ್ ಪಾಸ್ ಯೋಜನೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು, ಇದಕ್ಕೆ ಕೇಂದ್ರದಿಂದಲೂ ಪೂರ್ಣ ಸಹಕಾರ ನೀಡಬೇಕು. ಪುತ್ತೂರಿನಲ್ಲಿ ಸರಕಾರದ ಹಂತದಲ್ಲಿ ಮಣ್ಣು ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಬೇಕೆಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ. ನಿಯೋಗದಲ್ಲಿ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ನಿರ್ದೇಶಕ ಬಾಲಕೃಷ್ಣ ಬಾಣಜಾಲು, ಸುಳ್ಯ ಗ್ರಾ..ಪಂ ಸದಸ್ಯ ಹರೀಶ್ ಉಬರಡ್ಕ, ವಸಂತ ವೀರಮಂಗಲ, ಜೀವನ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments