HomeFresh Newsಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ: ಶಾಸಕರಿಂದ ಪಂಚಾಯತ್ ಗಳೊಂದಿಗೆ ನಿರಂತರ ಸಭೆ

ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ: ಶಾಸಕರಿಂದ ಪಂಚಾಯತ್ ಗಳೊಂದಿಗೆ ನಿರಂತರ ಸಭೆ

ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯುವ ರೈತರಿಗೆ ಸರಕಾರ ಸೂಕ್ತ ಸೌಲಭ್ಯ ನೀಡಲಿದೆ. ಇದರ ಪ್ರಯೋಜನವನ್ನು ಪಡೆದು ಸರಕಾರದ ” ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ” ಯೋಜನೆ ಯಶಸ್ವಿಗೊಳಿಸಬೇಕು ಎಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು.


ಅವರು ಎಡಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ, ಅಧಿಕಾರಿಗಳ ಸಭೆಯಲ್ಲಿ ಈ ಯೋಜನೆಯ ಸಮಗ್ರ ಮಾಹಿತಿ ನೀಡಿದರು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ಸರಕಾರದ ಆದೇಶದಂತೆ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಅದರ ಮುಂದುವರೆದ ಭಾಗವಾಗಿ ಶುಕ್ರವಾರ ಸಭೆ ನಡೆಯಿತು.

ಎಡಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕುಪ್ಪೆಪದವು ಪಂಚಾಯತ್, ಮುತ್ತೂರು ಪಂಚಾಯತ್, ಕೊಂಪದವು ಪಂಚಾಯತ್, ಮುಚ್ಚೂರು ಪಂಚಾಯತ್, ಬಡಗ ಎಡಪದವು ಪಂಚಾಯತ್, ತೆಂಕ ಎಡಪದವು ಪಂಚಾಯತ್ ಮಟ್ಟದ ಜನಪ್ರತಿನಿಧಿಗಳ, ಅಧಿಕಾರಿಗಳ ಸಭೆ ನಡೆಯಿತು. ಶಾಸಕರೊಂದಿಗೆ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನಾಗೇಶ್ ಶೆಟ್ಟಿ, ಸ್ಥಳೀಯ ಪಂಚಾಯತ್ ಅಧ್ಯಕ್ಷರಾದ ಸುಕುಮಾರ್, ಹರೀಶ್, ಮೋಹಿನಿ, ಡೆಪ್ಯೂಟಿ ತಹಶೀಲ್ದಾರ್ ಶಿವಪ್ರಸಾದ್, ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ರೈ, ಪಂಚಾಯತ್ ಉಪಾಧ್ಯಕ್ಷರುಗಳು, ಸದಸ್ಯರುಗಳು, ಕೃಷಿ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪಿಡಿಒಗಳು, ಗ್ರಾಮ ಕರಣಿಕರುಗಳು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments