2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ವಾಗಿದ್ದು ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದರು.

ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದರು.

ಜುಲೈ 19 ಮತ್ತು 22ಕ್ಕೆ ಪರೀಕ್ಷೆ ನಡೆದಿದ್ದು, 8.76 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಫಲಿತಾಂಶದಲ್ಲಿ ಎ + ಶ್ರೇಣಿಯಲ್ಲಿ 1,28,931 (ಶೇ.16.25) ವಿದ್ಯಾರ್ಥಿಗಳು, ಎ ಶ್ರೇಣಿಯಲ್ಲಿ 2,50,317(ಶೇ 32)ವಿದ್ಯಾರ್ಥಿಗಳು, ಬಿ ಶ್ರೇಣಿಯಲ್ಲಿ 2,87,684(ಶೇ.36.86) ವಿದ್ಯಾರ್ಥಿಗಳು, ಸಿ ಶ್ರೇಣಿಯಲ್ಲಿ 1,13,610(ಶೇ.14.55) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

626ಕ್ಕೆ 625 ಅಂಕವನ್ನು 157 ವಿದ್ಯಾರ್ಥಿಗಳು ಪಡೆದಿದ್ದಾರೆ. 625ಕ್ಕೆ 623 ಅಂಕವನ್ನು 289 ವಿದ್ಯಾರ್ಥಿಗಳು ಪಡೆದಿದ್ದಾರೆ.

ಶೇ.9 ರಷ್ಟು ಮಕ್ಕಳನ್ನು ಗ್ರೇಸ್ ಮಾರ್ಕ್ ನೀಡಿ ಪಾಸ್ ಮಾಡಲಾಗಿದೆ. 13 ವಿದ್ಯಾರ್ಥಿಗಳಿಗೆ ಗರಿಷ್ಠ 28 ಗ್ರೇಸ್ ಮಾರ್ಕ್ ನೀಡಲಾಗಿದೆ.

ಪರೀಕ್ಷೆ ಬರೆದಿದ್ದವರು:

ಗಂಡು ಮಕ್ಕಳು–4,07,161 (ಎಲ್ಲರೂ ಉತ್ತೀರ್ಣ)
ಹೆಣ್ಣು ಮಕ್ಕಳು–4,01,282 (4,01,281 ಬಾಲಕಿಯರು ಉತ್ತೀರ್ಣ–ಒಬ್ಬ ವಿದ್ಯಾರ್ಥಿನಿ ಹೆಸರಿನಲ್ಲಿ ಬೇರೊಬ್ಬರು ಪರೀಕ್ಷೆ ಬರೆದಿದ್ದರು)

ಫಲಿತಾಂಶ:

A+ – 128931 (ಶೇ 16)
A – 250317 (ಶೇ 32.07)
B– 287684 (ಶೇ 36.86)
C– 113610 (ಶೇ 14.55)

Related Posts

Leave a Reply

Your email address will not be published.