Home 2021 July (Page 2)

ಆಗಸ್ಟ್ 1ರಂದು ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ ಸಮಾರಂಭವೂ ಆಗಸ್ಟ್ 1ರಂದು ಮಂಗಳೂರಲ್ಲಿ ನಡೆಯಲಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ

ಪುತ್ತೂರು : ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಘರ್ಷಣೆ

ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು .ಈ ಮಧ್ಯೆ ಹೊರ ವಾರ್ಡಿನವರು ವ್ಯಾಕ್ಸಿನ್ ಪಡೆಯಲು ಬಂದಿದ್ದಾರೆ

ಮಂತ್ರಿಮಂಡಲದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಸ್ಥಾನ ನೀಡಲು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ

ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕ ರಾಜ್ಯ ಕಂಡ ಬಲು

ಉಳ್ಳಾಲದಲ್ಲಿ ಕಾರು ಚಾಲಕನ ಅವಾಂತರ: ಸರಣಿ ಅಪಘಾತ:ರಿಕ್ಷಾ ಚಾಲಕಗೆ ಗಾಯ

ಉಳ್ಳಾಲ: ಕಾರು ಚಾಲಕನ ಅವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರ ಸಮೀಪ ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಹೋಂಡ ಸಿವಿಕ್ ಕಾರೊಂದು ಧಾವಿಸಿ ಎದುರಿನಿಂದ ಬರುತ್ತಿದ್ದ ರಿಕ್ಷಾಗೆ ಢಿಕ್ಕಿ ಹೊಡೆದು ಬಳಿಕ ವೈದ್ಯ

 ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು : ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ

ಕತ್ತು ಕೊಯ್ದು ಯುವ ಉದ್ಯಮಿಯ ಬರ್ಬರ ಹತ್ಯೆ

ಕುಂದಾಪುರ: ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೋರ್ವರನ ಕುತ್ತಿಗೆ ಕತ್ತರಿಸಿ ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಉದ್ಯಮಿ. ಮೇಲ್ನೋಟಕ್ಕೆ ಹಣಕಾಸು ವಿಚಾರದಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು

ಸೊರ್ನಾಡು ಬಳಿ ಡೀಸೆಲ್ ಪೈಪ್‌ಲೈನ್‌ಗೆ ಕನ್ನ

ಬಂಟ್ವಾಳ: ಮಣ್ಣಡಿ ಹಾದು ಹೋಗಿರುವ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೇಲ್ ಕಳವು ನಡೆಸುತ್ತಿದ್ದ ಪ್ರಕರಣವೊಂದು ತಾಲೂಕಿನ ಅರಳ ಗ್ರಾಮದ ಸೊರ್ನಾಡು ಬಳಿ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ. ಇಲ್ಲಿನ ಅರ್ಬಿ ಎಂಬಲ್ಲಿ ಐವನ್ ಪಿಂಟೊ ಎಂಬರಿಗೆ ಸೇರಿದ ಖಾಸಗಿ ಜಮೀನಿನಲ್ಲಿ ಮಂಗಳೂರು- ಬೆಂಗಳೂರಿಗೆ ಹಾದು ಹೋಗಿರುವ ಎಚ್ ಪಿ.ಎಸ್ ಎಲ್ ಪೆಟ್ರೊನೆಟ್ ಸಂಸ್ಥೆಗೆ ಸೇರಿದ

ಮತ್ತೆ ಮರವೂರು ಸೇತುವೆ ಮೇಲೆ ಸಂಚರಿಸಿದ ವಾಹನಗಳು

ಫಿಲ್ಲರ್ ಕುಸಿತದಿಂದಾಗಿ ಬಿರುಕು ಬಿಟ್ಟಿದ್ದ ಮರವೂರು ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದಿನಿಂದ ವಾಹನ ಸಂಚಾರ ಆರಂಭಗೊಂಡಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕೊಂಡಿಯಾಗಿರುವ ಕಾವೂರು ಬಳಿ ಮರವೂರು ಸೇತುವೆಯ ಕುಸಿದು ಪಿಲ್ಲರ್ ದುರಸ್ತಿ ಕಾರ್ಯ ಬಹುತೇಕ ಪೂರ್ತಿಯಾಗಿದ್ದು, ಯಶ್ವಸಿಯಾಗಿದೆ. ಜೂನ್ 15ರಂದು ಮಂಗಳೂರಿನಿಂದ ಬಜ್ಪೆ ಅಂತರ

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟರು. ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿದರು.