ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ರಾಜು ಹೊಸ್ಮಠ ವಿರುದ್ದ ಪೊಕ್ಸೋ ಪ್ರಕರಣ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಂಬೇಡ್ಕರ್‌ ಅಪತ್‌ ಬಾಂಧವ ಟ್ರಸ್ಟ್‌ ನ ಅಧ್ಯಕ್ಷನ ವಿರುದ್ದ ನ .7ರಂದು ಪೊಕ್ಸೋ ಪ್ರಕರಣ ದಾಖಲಾಗಿದೆ. ರಾಜು ಹೊಸ್ಮಠ ಆರೋಪಿಯಾಗಿದ್ದು ಈತನ ವಿರುದ್ದ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತ: ಕೌಡಿಚ್ಚಾರ್‌ ನಿವಾಸಿ ಸದ್ಯ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸಂತ್ರಸ್ತೆಯ ಕುಟುಂಬವೂ ವಾಸಿಸುತಿದೆ. ಸಂತ್ರಸ್ತೆಗೆ ಆರೋಪಿಯ ಪರಿಚಯವೂ 2019 ರಲ್ಲಿ ಆಗಿತ್ತು ಎಂದು ಹೇಳಲಾಗಿದೆ. ಆರೋಪಿಯೂ ಮದುವೆಯಾಗುವುದಾಗಿ ನಂಬಿಸಿ ಸಂತ್ರಸ್ತೆಗೆ ಆತನ ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.

ಈ ಬಗ್ಗೆ ಸಂತ್ರಸ್ತೆಯ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆ 2012 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯೂ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Related Posts

Leave a Reply

Your email address will not be published. Required fields are marked *

How Can We Help You?