Home 2021 November (Page 3)

ಆಕಸ್ಮಿಕ ಬೆಂಕಿ : ಸುಟ್ಟು ಹೋದ ಕಾರು

ಕಡಬ : ಆಲ್ಟೋ ಕಾರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ಸಂಜೆ ವೇಳೆ ಬಳ್ಪ ಸಮೀಪ ಸಂಭವಿಸಿದೆ. ಪಂಜ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಳ್ಪ ಎಂಬಲ್ಲಿಯ ಪಾದೆ ಬಳಿ ಘಟನೆ ಸಂಭವಿಸಿದೆ. ಪಂಜದ ಕೃಷ್ಣನಗರ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆಗೆ ಎಸಿಬಿ ದಾಳಿ || KS Linge gowda

ಬೆಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯುಟಿವ್ ಇಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೆ.ಎಸ್

ಮುಂಬಯಿ ಪತ್ರಕರ್ತ ಪಾಲೆತ್ತಾಡಿ ಅವರಿಗೆ V4 ಸುದ್ದಿವಾಹಿನಿಯ ವತಿಯಿಂದ ಅಭಿನಂದನೆ

ಮಂಗಳೂರು: ನವಂಬರ್ 1ರಂದು ಬೆಂಗಳೂರಿನಲ್ಲಿ ಜರಗಿದ ರಾಜ್ಯೋತ್ಸವ ಸಮಾರಂಭದಲ್ಲಿ 2021 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಹೊರನಾಡ ಕನ್ನಡಿಗ, ಮುಂಬಯಿ ‘ಕರ್ನಾಟಕ ಮಲ್ಲ’ ಕನ್ನಡ ದೈನಿಕದ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಮಂಗಳೂರಿನಲ್ಲಿV4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಾರ್ಯಾಲಯದಲ್ಲಿಅಭಿನಂದಿಸಲಾಯಿತು.

ನಟಿ ಕಂಗನಾ ರಣಾವತ್ ಹಾಗೂ ಪತ್ರಕರ್ತ ಅಜಿತ್ ಬಾರ್ತಿ ವಿರುದ್ಧ ದೇಶ ದ್ರೋಹ ದೂರು ದಾಖಲಿಸಿದ ಕೆಪಿವೈಸಿಸಿ

ಮೋದಿ ಸರ್ಕಾರ ಬೇಕಿದ್ದರೆ ಕಂಗನಾ ಅವರನ್ನು ಆಜಾದಿ ಕಾ ಅಮೃತ್ ಮಹೋತ್ಸವ್ ರಾಯಭಾರಿಯಾಗಿ ನೇಮಿಸಿಕೊಳ್ಳಲಿ – ಎಂ.ಎಸ್. ರಕ್ಷಾ ರಾಮಯ್ಯ ಬೆಂಗಳೂರು, ನ, 23; ಸ್ವಾತಂತ್ರ್ಯ ಸಂಗ್ರಾಮದ ವೀರ ಸೇನಾನಿಗಳ ವಿರುದ್ಧ ಕ್ರೂರ ಮತ್ತು ಮಾನಹಾನಿಯಾಗುವ ರೀತಿಯಲ್ಲಿ ಮಾತನಾಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಮಹತ್ಮಾ ಗಾಂಧೀಜಿ – ಪಂಡಿತ್ ಜವಾಹರ್ ಲಾಲ್ ನೆಹರು ವಿರುದ್ಧ

ಗುರುಪುರ ಕೈಕಂಬದಲ್ಲಿ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶ

ಗುರುಪುರ ಕೈಕಂಬದಲ್ಲಿ ನಡೆದ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶದ ಬಹಿರಂಗ ಸಭೆಯನ್ನು ಉದ್ದೇಶಿಸಿ ಕೇರಳ ರಾಜ್ಯದ ಮಾಜಿ ಆರೋಗ್ಯ ಸಚಿವೆ ಶೈಲಜಾ ಟೀಚರ್ ಅವರು ಮಾತನಾಡಿದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು

ಸಂಸ್ಕಾರ ಭಾರತೀ ಆಶ್ರಯದಲ್ಲಿ ಕ್ರಾಂತಿಸೂರ್ಯ ಭಗತ್ ಸಿಂಹ ಯಕ್ಷಗಾನ

ಭಾರತದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಪ್ರಯುಕ್ತ ಕಲೆ ಮತ್ತು ಸಾಹಿತ್ಯಕ್ಕಾಗಿ ಸಮರ್ಪಿತವಾದ ರಾಷ್ಟ್ರೀಯ ಸಂಘಟನೆಯಾದ ಮಂಗಳೂರು ಸಂಸ್ಕಾರ ಭಾರತೀಯ ಆಶ್ರಯದಲ್ಲಿ ನವೆಂಬರ್ 28 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಕ್ರಾಂತಿಸೂರ್ಯ ಭಗತ ಸಿಂಹ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು

ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಇನ್ನು ಮುಂದೆ ಇಂತಹ ಘಟನೆಗಳು ನಡೆದಲ್ಲಿ ಅದಕ್ಕೆ ಸರಕಾರವೇ ಹೊಣೆ ಹೊರಬೇಕು ಎಂಬುದು ನಮ್ಮ ಆಗ್ರಹ ಎಂದು ಪುತ್ತೂರು ತಾಲೂಕು

ಎಸ್‌ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿಸೆಂಬರ್ 10 ರಂದು ನಡೆಯುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್ ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿ, ಯುವ ನಾಯಕ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಇರುವಂತಹ ಸಮಸ್ಯೆ

ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ಮಂಗಳೂರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಸ್ಪರ್ಧಿಸುತ್ತಿದ್ದು, ಇಂದು ಅವರು ಚುನಾವಣಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಾಮಪತ್ರ ಸಲ್ಲಿಸಿದರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಭಂಡಾರಿ, ವಿದ್ಯಾರ್ಥಿ ಜೀವನದಿಂದಲೇ ನಾನು ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದೇನೆ. ಕಳೆದ 40

ಎಸ್‌ಎಸ್‌ಎಫ್ ರಾಜ್ಯ ಪ್ರತಿಭೋತ್ಸವ

ಕರ್ನಾಟ ರಾಜ್ಯ ವಿದ್ಯಾರ್ಥಿ ಒಕ್ಕೂಟವು ಯುವ ಜನಾಂಗದದಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪೋಷಿಸಲು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುತ್ತಾ ಬಂದಿರುವ ಪ್ರತಿಭೋತ್ಸವ ರಾಜ್ಯ ಸಮಾವೇಶವು ನವೆಂಬರ್ 26 ರಿಂದ 28 ರ ವರೆಗೆ ಕೃಷ್ಣಾಪುರದಲ್ಲಿ ನಡೆಯಲಿದೆ ಎಂದು ರಾಜ್ಯ ಪ್ರತಿಭೋತ್ಸವ ಸಮಿತಿಯ ಚೇರ್‌ಮೆನ್ ಕೆ.ಎಂ. ಮುಸ್ತಫಾ ನಈಮಿ ಹಾವೇರಿ ತಿಳಿಸಿದರು.