Home 2021 November (Page 8)

ನಳಿನ್ ಕುಮಾರ್‌ಗೆ ಎನ್‌ ಇಪಿ ಅಂದ್ರೇನು ಗೊತ್ತಾ..?: ಮಂಗಳೂರಲ್ಲಿ ಎನ್‌ಎಸ್‌ಯುಐ ನಾಯಕರ ಆಕ್ರೋಶ

ರಾಜ್ಯದಲ್ಲಿ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳ ಮೇಲೆ ಹೇರಲಾಗುತ್ತಿದೆ. ಶಿಕ್ಷಣ ನೀತಿ ಹೇಗಿರಬೇಕು, ಏನೆಲ್ಲಾ ಬದಲಾವಣೆ ಆಗಿದೆ ಎನ್ನುವುದರ ಬಗ್ಗೆ ಶಾಲೆ, ಕಾಲೇಜಿನ ಆಡಳಿತ ಸಂಸ್ಥೆಯಾಗಲೀ, ಶಿಕ್ಷಕ ವೃಂದಕ್ಕಾಗಲೀ ಮಾಹಿತಿ ಇಲ್ಲ. ಹತ್ತನೇ ಕ್ಲಾಸ್ ಕಲಿಯದವರು ಶಿಕ್ಷಣ ನೀತಿ ಮಾಡಿದ್ದಾರೆ. ಇಲ್ಲಿನ ಬಿಜೆಪಿ ನಾಯಕರಿಗಾಗಲೀ, ಬಿಜೆಪಿ ಅಧ್ಯಕ್ಷ

ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಶ್ರೀಗಂಧ ಎಣ್ಣೆಯನ್ನು ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಲಯದಿಂದ ಜಾಮೀನು ಪಡೆದ ಆರೋಪಿಗಳ ಪೈಕಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಸಂಪ್ಯ ಎಸ್.ಐ ಉದಯ ರವಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಕೇರಳದ ಕಣ್ಣೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕಾಸರಗೋಡು

ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ:ಲೋಕಾಯುಕ್ತ ನಿರೀಕ್ಷಕ ಅಮಾನುಲ್ಲಾ 

ಮಂಗಳೂರು:  ಕರ್ನಾಟಕ ಲೋಕಾಯುಕ್ತ, ನಗರದ ರಥಬೀದಿಯ ಡಾ. ದಯಾನಂದ ಪೈ – ಪಿ. ಸತೀಶ್ ಪೈ ಸರಕಾರಿ ಪ್ರಥಮದರ್ಜೆ ಸಹಯೋಗದಲ್ಲಿ ವಿಚಕ್ಷಣ ಜಾಗೃತಿ ಸಪ್ತಾಹ -2021ರ ಅಂಗವಾಗಿ ಪ್ರತಿಜ್ಞಾವಿಧಿ, ಜಾಗೃತಿ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮವನ್ನು ಇತ್ತೀಚೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಲೋಕಾಯುಕ್ತದ ಮಂಗಳೂರು ನಿರೀಕ್ಷಕರಾದ ಅಮಾನುಲ್ಲಾ ಅವರು

ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ ಗೇಟ್ ಸಿಬ್ಬಂದಿಗಳ ಮುಷ್ಕರ

ಸಿಬ್ಬಂದಿಗಳಿಗೆ ಸಂಬಳ ನೀಡದೆ ಸತ್ತಾಯಿಸುತ್ತಿದ್ದ “ಟಿಬಿಆರ್” ಕಂಪನಿಯ ವಿರುದ್ಧ ಸಮರ ಸಾರಿರುವ ಸುಮಾರು ತೊಂಭತ್ತು ಮಂದಿ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರನಡೆಸುತ್ತಿದ್ದಾರೆ. ಮುಂಜಾನೆ ಎಂಟು ಗಂಟೆಗೆ ಮುಷ್ಕರ ಆರಂಭಿಸಿದ ಸಿಬ್ಬಂದಿಗಳ ಮನವೊಲಿಸಲು ಅಧಿಕಾರಿಗಳು ವಿವಿಧ ಬಗೆಯಲ್ಲಿ ಪ್ರಯತ್ನ ನಡೆಸಿದರೂ ಪ್ರಯತ್ನ

ಡಿಸೆಂಬರ್ 12 ರಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ

  ಬೆಂಗಳೂರು: ಒಕ್ಕಲಿಗರ ಪ್ರಾತಿನಿಧಿಕ ಸಂಸ್ಥೆಗೆ ಡಿಸೆಂಬರ್ 12 ರಂದು ನಡೆಯಲಿರುವ ಚುನಾವಣೆಗೆ ಸಂಘದ ಮಾಜಿ ಅಧ್ಯಕ್ಷ ಬಿ. ಕೆಂಚಪ್ಪಗೌಡ ನೇತೃತ್ವದ ತಂಡ ಸಜ್ಜಾಗಿದ್ದು, ಸಂಘದ ಗತ ವೈಭವವನ್ನು ಮತ್ತೆ ಮರಳಿ ತರಲು ಕಾರ್ಯೋನ್ಮುಖವಾಗಿದೆ.   2021 – 26 ರ ಅವಧಿಗೆ ನಡೆಯಲಿರುವ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.

ಕಾಂಗ್ರೆಸ್ ಪಕ್ಷದ ಮಾನವ ಹಕ್ಕುಗಳ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಥೋಮಸ್ ಪ್ರಸಾದ್ ಡಿಸೋಜಾ ನೇಮಕ

ಕಾಂಗ್ರೆಸ್ ಪಕ್ಷದ ಮಾನವ ಹಕ್ಕುಗಳ ಘಟಕದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ತೋಮಸ್ ಪ್ರಸಾದ್ ಡಿಸೋಜಾ ನೇಮಕಗೊಂಡಿದ್ದಾರೆ. ತೋಮಸ್ ಪ್ರಸಾದ್ ಡಿಸೋಜಾ ಅವರು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಹಿಂದಿನ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಅವರನ್ನು ನೇಮಿಸಲಾಗಿದೆ.

ಪಡುಬಿದ್ರಿ ಮುಖ್ಯ ಪೇಟೆಯಲ್ಲೇ ಸರಣಿ ಕಳ್ಳತನ

ಪಡುಬಿದ್ರಿ ಪೊಲೀಸ್ ಠಾಣೆಯ ನೂರು ಮೀಟರ್ ಅಂತರ, ಪೇಟೆಭಾಗದ ಪೊಲೀಸ್ ವಾಹನ ತಪಾಸಣಾ ಸ್ಥಳಕ್ಕೆ ಇಪ್ಪತ್ತು ಮೀಟರ್ ಅಂತರದಲ್ಲಿರುವ ಆರು ಅಂಗಡಿಗಳಲ್ಲಿ ಕಳ್ಳರು ಕೈಚಳಕ ತೋರಿಸುವ ಮೂಲಕ ಸರಣಿ ಕಳ್ಳತನ ನಡೆಸಿದ್ದಾರೆ. ಪೊಲೀಸರಿಗೆ ಸವಾಲಾದ ಈ ಕಳ್ಳತನ ಪ್ರಕರಣ ಭೇದಿಸಲು ಪೊಲೀಸರು ಸಿಸಿ ಕ್ಯಾಮಾರಗಳ ಮೊರೆ ಹೋಗಿದ್ದಾರೆ. ಕಳ್ಳತನ ನಡೆದ ಎರಡು ಅಂಗಡಿಗಳ ಅಂಚು ತೆಗೆದು ಒಳ

ತುಳುನಾಡಿನ ರಂಗ ಕಲಾವಿದ ಯತೀಶ್ ಶೆಟ್ಟಿ ಉಚ್ಚಿಲ ಅನಾರೋಗ್ಯದಿಂದಾಗಿ ವಿಧಿವಶ

ತುಳುನಾಡಿದ ಹತ್ತು ಹಲವು ನಾಟಕ ತಂಡಗಳಲ್ಲಿ ತನ್ನ ನಟನಾ ಸಾಮರ್ಥ್ಯವನ್ನು ತೋರಿಸಿ ಅಲ್ಲದೇ ವಿ4ನ್ಯೂಸ್ ಕರ್ನಾಟಕದ ಕಾಮಿಡಿ ಪ್ರೀಮಿಯರ್ ಲೀಗ್‌ನಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ಪ್ರಸಿದ್ಧ ಕಲಾವಿದ ಯತೀಶ್ ಶೆಟ್ಟಿ ಉಚ್ಚಿಲರವರು ಅನಾರೋಗ್ಯದ ಕಾರಣದಲ್ಲಿ ವಿಧಿವಶರಾಗಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು ತನ್ನ ಉತ್ತಮ ನಡವಳಿಕೆ ಮತ್ತು ಉತ್ತಮ ನಟನೆಯ

ಯುನಿವರ್ಸಿಟಿ ಸಂಧ್ಯಾ ಕಾಲೇಜಿನಲ್ಲಿ  ತುಳು ಎಂಎ ಪ್ರವೇಶಾತಿ ಆರಂಭ

ಮಂಗಳೂರು: ಒಂದು ಭಾಷೆ ಶೈಕ್ಷಣಿಕವಾಗಿ ಗಟ್ಟಿಯಾದಷ್ಟು ಎಲ್ಲ ಸ್ತರಗಳಲ್ಲಿ ಬಲವರ್ಧನೆಗೊಳ್ಳುತ್ತಾ ಹೋಗುತ್ತದೆ. ತುಳು ಭಾಷೆಯಾಗಿ ಬೆಳೆದಿದ್ದರೂ, ಶೈಕ್ಷಣಿಕ ಅವಕಾಶಗಳು ಇರಲಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು 2018-19ನೇ ಸಾಲಿನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗವನ್ನು