Home 2021 December

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನಸೆಳೆದ ಶಾಸಕ ರಾಜೇಶ್ ನಾಯಕ್

ಬಂಟ್ವಾಳ: ಉಡುಪಿ ಜಿಲ್ಲೆಯ ಉಡುಪಿ ಪವರ್ ಕಾರ್ಪೋರೇಷನ್ ಲಿಮಿಟೆಡ್ ನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್ ವಿತರಣಾ ಲೈನ್ ಮತ್ತು ಟವರ್ ನಿರ್ಮಾಣದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಹಾಗೂ ಭೂಮಿ ಕಳೆದುಕೊಳ್ಳಲಿರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಹಾಗೂ ಪರಿಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಬೆಳಗಾವಿ ಅಧಿವೇಶನದಲ್ಲಿ ಸರಕಾರದ ಗಮನ

ಐಪಿಎಲ್ ಮಾದರಿಯಂತೆ ವಾಲಿಬಾಲ್‌ನಲ್ಲೂ ಹೊಸ ಲೀಗ್

ಕೊಚ್ಚಿನ್: ಐಪಿಎಲ್ ಮಾದರಿಯಂತೆ ವಾಲಿಬಾಲ್‌ನಲ್ಲೂ ಹೊಸ ಲೀಗ್ ಆರಂಭವಾಗಿದ್ದು, ಮೊದಲ ಸೀಸನ್ ನ ಹರಾಜು ಪ್ರಕ್ರಿಯೆ ಇಂದು ಕೊಚ್ಚಿನ್ ನಲ್ಲಿ ನಡೆದಿದೆ. ಮಂಗಳೂರಿನ ಆಟಗಾರ ಅಶ್ವಲ್ ರೈ ಅವರು ದಾಖಲೆಯ ಮೊತ್ತಕ್ಕೆ ಕೋಲ್ಕತ್ತಾ ಥಂಡಲ್ ಬೋಲ್ಟ್ಸ್ ತಂಡದ ಪಾಲಾಗಿದ್ದಾರೆ. ಅಶ್ವಲ್ ರೈ ಅವರನ್ನು 15 ಲಕ್ಷ ರೂ. ಬೆಲೆಗೆ ಕೋಲ್ಕತ್ತಾ ತಂಡ ಖರೀದಿಸಿತು. ಇವರಂತೆ ಕಾರ್ತಿಕ್ ಎ

ದ.ಕ. ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ದಕ್ಷಿಣಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ಮಂಗಳವಾರ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ

ಪ್ರಮಾಣ ಪತ್ರ ಸ್ವೀಕರಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ

ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಪ್ರಮಾಣ ಪತ್ರ ವಿತರಿಸಿದರು

ಕಾಪು ಪುರಸಭೆ ಚುನಾವಣೆ: ಬಿಜೆಪಿಗೆ ಬಂಡಾಯ ಬಿಸಿ

ಕಾಪು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಬಂಡಾಯದ ಬಿಸಿ ಬಿಜೆಪಿಯನ್ನು ಸುಡಲಿದೆಯೇ ಎಂಬ ಆತಂಕ ಬಿಜೆಪಿ ಪಾಳಾಯದಲ್ಲಿ ಮೂಡಿದೆ.ನಾಮಪತ್ರ ಸಲ್ಲಿಕೆಗೆ ಡಿ.15 ಅಂತಿಮ ದಿನವಾಗಿದ್ದು, ಇದೀಗ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಳಿಸುತ್ತಿರುವಂತೆ, ಟಿಕೇಟ್ ವಂಚಿತರು ಕೆಂಡಾಮಂಡಲವಾಗಿದ್ದಾರೆ.

ಬೈಕಂಪಾಡಿಯಲ್ಲಿರುವ ಓಶಿಮಾ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್ : ಕಂಪನಿಯ ರಾಯಭಾರಿಯ ಪರಿಚಯ, ಪ್ರಚಾರ ಅಭಿಯಾನದ ಉದ್ಘಾಟನೆ

ಮಂಗಳೂರಿನ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪ್ರತಿಷ್ಠಿತ ಕಂಪನಿಯಾದ ಓಶಿಮಾ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್‍ನ ವೆಲ್ಡಿಂಗ್ ಎಲೆಕ್ಟ್ರೋಡ್ ಮತ್ತು ಇನ್ವರ್ಟರ್ ಬ್ಯಾಟರಿ ತಯಾರಕರು ಬೈಕಂಪಾಡಿಯ ಕೆನರಾಇಂಡಸ್ಟ್ರೀಸ್ ಅಸೋಸಿಯೇಶನ್‍ನಲ್ಲಿ, ತನ್ನ ಕಂಪನಿಯ ರಾಯಭಾರಿಯನ್ನು ಪರಿಚಯಿಸುವ ಹಾಗೂ ಪ್ರಚಾರ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಂಪೆನಿಯ

ಕೋವಿಡ್ ಸೂಕ್ಷ್ಮ ನಡವಳಿಕೆ ಮತ್ತು ಲಸಿಕೆಯ ಕುರಿತು ಮಾಹಿತಿ

ಸ್ವಚ್ಛ ಭಾರತ್ ಮಿಷನ್ (ಗ್ರಾ) ವತಿಯಿಂದ ಸಾಹಸ್, ಐಐಎಚ್‌ಎಂಆರ್ ಬೆಂಗಳೂರು, ಯುನಿಸೆಫ್ ಸಹಯೋಗದಲ್ಲಿಆಶಾ ಕಾರ್ಯಕರ್ತೆಯರಿಗೆ ಕೋವಿಡ್ -19 ಸೂಕ್ಷ್ಮ ನಡವಳಿಕೆ ಮತ್ತು ಲಸಿಕೆಯ ಕುರಿತು ಮಾಹಿತಿ,ಶಿಕ್ಷಣ ಹಾಗೂ ಸಂವಹನ ಕಾರ್ಯಾಗಾರವನ್ನು ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಅವರು ಆಶಾ ಕಾರ್ಯಕರ್ತೆಯರಿಗೆ Menstrual Cup ವಿತರಿಸುವ ಮೂಲಕ ಚಾಲನೆ ನೀಡಿದರು.

ಕರ್ನಾಟಕದಲ್ಲಿ ಅಸ್ಥಿತ್ವಕ್ಕೆ ಬಂದ ಡಿಜಿಟಲ್ ಮೀಡಿಯಾ ಫೋರಂ

ಮಾಧ್ಯಮ‌ಲೋಕದಲ್ಲಿ‌ ಮತ್ತೊಂದು ಹೊಸ ಬದಲಾವಣೆಯ ಡಿಜಿಟಲ್ ಕ್ರಾಂತಿ ಶುರುವಾಗಿದ್ದು ಗೊತ್ತೇಯಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ

ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಂತಹ ಅಭ್ಯರ್ಥಿ : ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಮತದಾರರಿಗೆ ಹಾಗೂ ಖರ್ಚಿಗೆ ಒಂದೇ ಒಂದು ರೂಪಾಯಿ ಖರ್ಚು ಮಾಡಿದೇ ಗೆದ್ದಂತಹ ಅಭ್ಯರ್ಥಿ ಅಂದರೆ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಎಂದು ಹೇಳಲು ಸಂತೋಷಪಡುತ್ತೇನೆ.

ಮತದಾನ ಮಾಡಿದ ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ : ಡಾ. ಮಂಜುನಾಥ ಭಂಡಾರಿ ಹೇಳಿಕೆ

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಟ್ಟ ಕಾಂಗ್ರೆಸ್ಸಿಗೆ ನಮಿಸುತ್ತೇನೆ. ನನಗೆ ಬೆಂಬಲ ಕೊಟ್ಟು ಹಾಗೂ ಮತದಾನ ಮಾಡಿದ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ಸಿನ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು. ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಸಂತೋಷ