ನಗರದಲ್ಲಿ ಅನಧಿಕೃತ ಗೂಡಂಗಡಿಗಳ ತೆರವು ಮನಪಾ ಅಧಿಕಾರಿಗಳಿಂದ ಕಾರ್ಯಾಚರಣೆ

ನಗರದೆಲ್ಲೆಡೆ ಫುಟ್ ಪಾತ್ ಮತ್ತು ರಸ್ತೆಗಳಲ್ಲಿ ವ್ಯಾಪಾರ ನಡೆಸುತ್ತಿರುವ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಲು ಇಂದಿನಿಂದ ಕಾರ್ಯಾಚರಣೆ ಆರಂಭಿಸಿದ್ದಾರೆ. ನಗರದ ಸ್ಟೇಟ್‍ಬ್ಯಾಂಕ್‍ಗಳಲ್ಲಿ ಅನಧಿಕೃತ ಗೂಡಂಗಡಿಗಳನ್ನು ತೆರವು ಮಾಡುತ್ತಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಮತ್ತು ಫುಟ್ ಪಾತ್ ಗಳನ್ನು ಅತಿಕ್ರಮಿಸಿ ಹಲವು ಕಡೆಗಳಲ್ಲಿ ಗೂಡಂಗಡಿ ವ್ಯಾಪಾರ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಇಂದಿನಿಂದ ಅನಧಿಕೃತ ಗೂಡಂಗಡಿ ತೆರವು ಮಾಡಲಾಯಿತು.

ಪಾಲಿಕೆಯ ವ್ಯಾಪ್ತಿಯಲ್ಲಿ ಫುಟ್ ಪಾತ್ ಮತ್ತು ವಾಹನಗಳು ಸಂಚರಿಸುವ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ವ್ಯಾಪಾರ ನಡೆಸುವ ಗೂಡಂಗಡಿಯ ವ್ಯಾಪಾರಸ್ಥರು ಈ ರಸ್ತೆ ಮತ್ತು ಫುಟ್ ಪಾತ್ ಗಳನ್ನು ಅತಿಕ್ರಮಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಮುಖ್ಯವಾಗಿ ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿರುವ ಕುರಿತು ಹಲವು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಅನಧಿಕೃತ ಗೂಡಂಗಡಿಗಳನ್ನು ಪೋಲಿಸ್ಇಲಾಖೆಯ ಸಹಾಯದಿಂದ ತುರ್ತಾಗಿ ತೆರವುಗೊಳಿಸಲು ತೀರ್ಮಾನಿಸಲಾಗಿದೆ ಇಂದಿನಿಂದ ಪ್ರತಿದಿನ ತೆರವು ಕಾರ್ಯ ನಡೆಯಲಿದೆ ಎಂದು ಆಯುಕ್ತ ಅಕ್ಷಯ್ ಶ್ರೀಧರ್ ಹೇಳಿದರು.

Related Posts

Leave a Reply

Your email address will not be published.

How Can We Help You?