ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 5ನೇ ವರ್ಷದ ಮಂಗಳೂರು ಕಂಬಳ

ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 5ನೇ ವರ್ಷದ ಮಂಗಳೂರು ಕಂಬಳ ದಿನಾಂಕ 22 ಜನವರಿ 2021 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ 23 ಡಿಸೆಂಬರ್ 2021 ರಂದು ಸಾಯಂಕಾಲ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.

ಸಭೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಕರೆ ನೀಡಿದರು.

 ಮಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಕ್ಯಾಪ್ಟನ್ ಬೃಜೇಶ್ ಚೌಟ ಮಾತನಾಡಿ ಮಂಗಳೂರು ಕಂಬಳ 5ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಹಿಂದಿಗಿಂತಲೂ ಹೆಚ್ಚು ವಿಜೃಂಭಣೆಯಿಂದ ಕಂಬಳ ಕೂಟವನ್ನು ಆಯೋಜಿಸುವುದು ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಮತ್ತು ಭಾರತ-ಪಾಕಿಸ್ತಾನ ಯುದ್ಧದ ಸುವರ್ಣ ಮಹೋತ್ಸವವನ್ನು ಕಂಬಳದ ಜೊತೆ ಆಚರಿಸುವ ನಿಟ್ಟಿನಲ್ಲಿ ಸಲಹೆ-ಸೂಚನೆಗಳನ್ನು ಪಡೆಯಲಾಯಿತು.

ಸಭೆಯಲ್ಲಿ ಭಾರತ ಸರಕಾರದ ಅಲೆಮಾರಿ ಅಭಿವೃದ್ಧಿ ಸಮಿತಿ ಸದಸ್ಯರಾದ ಭಾಸ್ಕರ್ ದಾಸ್ ಎಕ್ಕಾರು, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಭರತ್ ಸೂಟರ್ ಪೇಟೆ, ಮನೋಜ್ ಕುಮಾರ್, ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ, ಸುಧಾಕರ ಶೆಟ್ಟಿ ಮುಗೆರೋಡಿ, ಮಂಗಳೂರು ಕಂಬಳ ಸಮಿತಿಯ ಸುಜಿತ್ ಪ್ರತಾಪ್, ಸಚಿನ್ ಶೆಟ್ಟಿ, ಪ್ರೀತಮ್ ರೈ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *

How Can We Help You?