ಸುರತ್ಕಲ್ ನಲ್ಲಿ ನೇಣು ಬಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಸುರತ್ಕಲ್ ಎನ್ಐಟಿಕೆಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಬಿಹಾರ, ಪಾಟ್ನಾ ನಗರದ ಸೌರವ್ (19) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ನಡೆದಿದೆ.

ಸೌರವ್ ಡೆತ್ನೋಟ್ ಬರೆದಿದ್ದು, ಶೈಕ್ಷಣಿಕ ಸಾಲ ಪಡೆದು ಬಿಇ ವ್ಯಾಸಂಗ ಮಾಡುತ್ತಿದ್ದು, ಓದು ಮುಗಿಯುವವರೆಗೆ ಸಾಲ ಹೆಚ್ಚಾಗುವ ಭಯ ಹಾಗೂ ಉದ್ಯೋಗ ಸಿಗದೇ ಇದ್ದರೆ ಹೇಗೆ ಎಂಬ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ. ನನ್ನ ಸಾವಿಗೆ ಯಾರೂ ಕೂಡ ಕಾರಣರಲ್ಲ ಎಂದು ಉಲ್ಲೇಖ ಮಾಡಿರುವುದಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಸೌರವ್ ಪೋಷಕರು ತುಂಬಾ ಬಡವವರು ಎಂದು ತಿಳಿದು ಬಂದಿದ್ದು, ಅವರಿಗೆ ಬಗ್ಗೆ ಮಾಹಿತಿ ನೀಡಿದ್ದು, ಅವರು ನಮಗೆ ಬರುವುದಕ್ಕೆ ಆಗುವುದಿಲ್ಲ ಸುರತ್ಕಲ್ನಲ್ಲಿಯೇ ಅಂತ್ಯಕ್ರಿಯೆ ಮಾಡಿ ಎಂದು ತಿಳಿಸಿದ್ದಾರೆ. ಆದರೆ, ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಮೃತ ದೇಹವನ್ನು ಪಾಟ್ನಾಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದ್ದಾರೆ. ಮಗನ ಸಾವಿನ ಬಗ್ಗೆ ಪೋಷಕರು ಕೂಡ ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ. ಸೌರವ್ ಎಸ್ಸೆಸ್ಸೆಲ್ಸಿ ಓದುತ್ತಿದ್ದಾಗ ಕೂಡ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂದು ಪೋಷಕರು ಮಾಹಿತಿ ನೀಡಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *

How Can We Help You?