ಬೈಕ್‌ಗೆ ಢಿಕ್ಕಿ ಹೊಡೆದ ಜೀಪು : ಬೈಕ್ ಸವಾರನಿಗೆ ಗಂಭೀರ ಗಾಯ

ಮೂಡುಬಿದಿರೆ: ವಿದ್ಯಾಗಿರಿ ಬಳಿ ಪೊಲೀಸ್ ಇಲಾಖೆಯ ಜೀಪೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.ಮಾರ್ಪಾಡಿ ಗ್ರಾಮದ ಮರಿಯಾಡಿ ನಿವಾಸಿ ಬಾವು ಬ್ಯಾರಿ ಗಾಯಗೊಂಡ ಬೈಕ್ ಸವಾರ.

ಬಾವು ಬ್ಯಾರಿ ಅವರು ಕೂಲಿ ಕಾರ್ಮಿಕನಾಗಿದ್ದು ಮೂಡುಬಿದಿರೆಯಿಂದ ಹಂಡೇಲು ಕಡೆಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.ಮರಳು ತುಂಬಿಸಿಕೊಂಡು ಹೋಗುತ್ತಿದ್ದ ಟಿಪ್ಪರನ್ನು ಬೆನ್ನತ್ತಿಕೊಂಡು ಪೊಲೀಸ್ ಜೀಪು ಬರುತ್ತಿದ್ದ ಸಂದರ್ಭದಲ್ಲಿ ಬೈಕ್ ಢಿಕ್ಕಿ ಹೊಡೆದಿದೆನ್ನಲಾಗಿದೆ.

Related Posts

Leave a Reply

Your email address will not be published. Required fields are marked *

How Can We Help You?