ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ

ಸುರತ್ಕಲ್: ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮದಲ್ಲಿ ರಂಗಚಾವಡಿ ಪ್ರಶಸ್ತಿ 2021 ಪ್ರದಾನ ಕಾರ್ಯಕ್ರಮ  ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಎಂ.ಆರ್.ಜಿ. ಗ್ರೂಪ್ ಇದರ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.”ಇತ್ತೀಚಿಗೆ ವಿಧಿವಶರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಗೀತ ನಮನ ಕಾರ್ಯಕ್ರಮದ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.ಇದೇ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ರಂಗಚಾವಡಿ ಪ್ರಶಸ್ತಿ-2021 ನೀಡಿ ಗೌರವಿಸಲಾಯಿತು.

ಬಳಿಕ ಮಾತಾಡಿದ ಮಂಗಳೂರು ಕಮಿಷನರ್ ಎನ್. ಶಶಿಕುಮಾರ್ ಅವರು, “ಮಂಗಳೂರಿಗೆ ಬಂದು ನಾನು ಒಂದು ವರ್ಷ ಪೂರ್ತಿ ಆಗುತ್ತಿದೆ. ಇಲ್ಲಿಗೆ ಬರುವ ಮೊದಲು ಇಲ್ಲಿನ ಜನ ಪೊಲೀಸ್ ಇಲಾಖೆಗೆ ಸಹಕಾರ ನೀಡುವುದಿಲ್ಲ ಎಂದು ಕೇಳಿ ತಿಳಿದುಕೊಂಡಿದ್ದೆ. ಆದರೆ ಇಲ್ಲಿ ಬಂದ ಬಳಿಕ ಇಲ್ಲಿನ ಜನರ ಪ್ರೀತಿ, ಬೇರೆ ಜಿಲ್ಲೆಗಳ ಜನರಿಗಿಂತ ಹೆಚ್ಚಿನ ಸಹಕಾರ ಕಂಡು ಖುಷಿಯಾಗಿದೆ ಎಂದರು.

ವೇದಿಕೆಯಲ್ಲಿ  ಶಾಸಕ ಡಾ.ವೈ ಭರತ್ ಶೆಟ್ಟಿ, ಜಾಗತಿಕ ಬಂಟ ಪ್ರತಿಷ್ಠಾನ ಇದರ ಪ್ರಧಾನ ಕಾರ್ಯದರ್ಶಿ ಸಿ.ಎ. ಸುಧೀರ್ ಕುಮಾರ್ ಶೆಟ್ಟಿ,  ದಿವ್ಯರೂಪ ಕನ್ ಸ್ಟ್ರಕ್ಷನ್ಸ್ ಮಾಲಕ ಯಾದವ ಕೋಟ್ಯಾನ್ ಪೆರ್ಮುದೆ, ಥಾಣೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ ಎಲ್. ಶೆಟ್ಟಿ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ರವಿ ಶೆಟ್ಟಿ ಕಳಸ, ಉದ್ಯಮಿ ರಮಾನಾಥ್ ಶೆಟ್ಟಿ ಬೈಕಂಪಾಡಿ, ಲಕುಮಿ ತಂಡದ ಸಂಚಾಲಕ ಕಿಶೋರ್ ಡಿ. ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜಾ, ‘ಕ್ಯಾಟ್ಕ’ ಅಧ್ಯಕ್ಷ ಮೋಹನ್ ಕೊಪ್ಪಲ, ಹಿರಿಯ ರಂಗಕರ್ಮಿ ವಿ.ಜಿ. ಪಾಲ್, ಚಿತ್ರನಟ ರೂಪೇಶ್ ಶೆಟ್ಟಿ,ಪ್ರಸಣ್ಣ ಶೆಟ್ಟಿ ಬೈಲೂರು, ನಿರೀಕ್ಷಾ ಶೆಟ್ಟಿ ರಂಗಚಾವಡಿ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *

How Can We Help You?