ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ 18 ವಾರ್ಡ್‍ಗಳಲ್ಲಿ ಶೇ. 73.56 ಮತದಾನ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿಯ 18 ವಾರ್ಡುಗಳಿಗೆ ಚುನಾವಣೆ ನಡೆದಿದ್ದು, ಶಾಂತಿಯುತ ಒಟ್ಟು ಶೇ. 73.56 ಮತದಾನವಾಗಿದೆ. 

ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಒಕ್ಕೆತ್ತೂರು ಸರ್ಕಾರಿ ಶಾಲೆ, ವಿಠಲ ಪದವಿ ಪೂರ್ವ ಕಾಲೇಜು, ಮೇಗಿನ ಪೇಟೆ, ಬೊಳಂತಿಮೊಗರು, ಸೈಂಟ್ ರೀಟಾ ಶಾಲೆಗಳಲ್ಲಿ ಮತಗಟ್ಟೆ ಮತಗಟ್ಟೆ ಸ್ಥಾಪಿಸಲಾಗಿತ್ತು. ಬೆಳಿಗ್ಗೆ 7ಗಂಟೆಗೆ ಮತದಾನ ಪ್ರಕ್ರಿಯೆ ಪ್ರಾರಂಭಗೊಂಡಿತ್ತು. ಇಬ್ಬನಿ ಸಮಸ್ಯೆ ಬಹುತೇಕ ಮಂದಿ 9 ಗಂಟೆ ನಂತರವೇ ಮತದಾನ ಕೇಂದ್ರಕ್ಕೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆ 10 ಗಂಟೆ ವೇಳೆಗೆ ಶೇ.20ರಷ್ಟು ಮತದಾನವಾಗಿತ್ತು. ಮಧ್ಯಾಹ್ನ ಹೊತ್ತಿಗೆ ಮತದಾರರ ಸಂಖ್ಯೆ ಹೆಚ್ಚಳವಾಗಿದ್ದು, ಕೆಲವು ಕಡೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುವ ದೃಶ್ಯ ಕಂಡು ಬಂದಿದೆ. ಮಧ್ಯಾಹ್ನ 1 ಗಂಟೆ ವೇಳೆ ಶೇ. 52 ಮತದಾನವಾಗಿತ್ತು. ಸಂಜೆ 5 ಗಂಟೆಗೆ  ಮತದಾನ ಪ್ರಕ್ರಿಯೆ ಮುಗಿದಿದ್ದು, ಶೇ. 73.56 ರಷ್ಟು ಮತದಾನವಾಗಿದೆ. ವಿಟ್ಲ ಸರ್ಕಾರಿ ಮಾದರಿ ಶಾಲೆಯಲ್ಲಿರುವ ಮತಗಟ್ಟೆ ಬಳಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ ಹೊರತು ಉಳಿದೆಡೆ ಶಾಂತಿಯುತವಾಗಿ ಮತದಾನ ನಡೆದಿದೆ.

ಮತಗಟ್ಟೆಗೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಮಾಧ್ಯಮದವರ ಜತೆ ಮಾತನಾಡಿ 3ನೇ ಎರಡು ಹೆಚ್ಚು ಬಹುಮತದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಜನರು ಮತದಾನ ಮಾಡಲು ಬಾರೀ ಉತ್ಸಹದಿಂದ ಆಗಮಿಸಿದ್ದಾರೆ. ಜನರು ಬದಲಾವಣೆಯನ್ನು ಬಯಸಿದ್ದು, ಅದರಂತೆ ಕಾಂಗ್ರೆಸ್ ವಿಟ್ಲ ಪಟ್ಟಣ ಪಂಚಾಯಿತಿನಲ್ಲಿ ಆಡಳಿತ ವಹಿಸಲಿದೆ. ನಮ್ಮ ಕಾರ್ಯಕರ್ತರು 18 ವಾರ್ಡ್‍ಗಳಲ್ಲಿ ಹಗಲು ರಾತ್ರಿ ಎನ್ನದೇ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಈ ಬಾರಿ ನಮಗೆ ಯಶಸ್ಸು ಖಂಡಿತವಾಗಿ ಸಿಗುತ್ತದೆ ಎಂದು ಹೇಳಿದರು.

42 ಮಂದಿ ಅಭ್ಯರ್ಥಿಗಳು ಕಣದಲ್ಲಿರುವ ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಎಸ್.ಡಿ.ಪಿ.ಐ. ಕೆಲ ವಾರ್ಡ್ ಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದಿದೆ. ಇಬ್ಬರು ಪಕ್ಷೇತರರೂ ಕಣದಲ್ಲಿದ್ದಾರೆ. 7191 ಮಂದಿ ಪುರುಷ ಮತದಾರರು, 7554 ಮಂದಿ ಮಹಿಳಾ ಮತದಾರರು ಸೇರಿದಂತೆ 14,71514 ಮಂದಿ ಮತದಾರರಿದ್ದು, 18 ಮತ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು.

Related Posts

Leave a Reply

Your email address will not be published.

How Can We Help You?