ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕರ್ನಾಟಕದ ಅಥ್ಲೀಟ್ ಪೂವಮ್ಮ

ಮಂಗಳೂರು: ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಿಂಪಿಯನ್ ಕರ್ನಾಟಕದ ಅಥ್ಲೀಟ್ ಪೂವಮ್ಮ ಕೇರಳದ ಅಥ್ಲೀಟ್ ಜಿತಿನ್ ಪೌಲ್ ಜತೆ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಮಂಗಳೂರು ಹೊರವಲಯದ ಅಡ್ಯಾರ್ ಗಾರ್ಡನ್ ವಿ.ಕೆ.ಶೆಟ್ಟಿ ಅಡಿಟೋರಿಯಂನಲ್ಲಿ ಕೊಡವ ಸಂಪ್ರದಾಯದಂತೆ ಮದುವೆ ನೆರವೇರಿತು. ಪೂವಮ್ಮ ಅವರ ತಂದೆ ಮಚ್ಚೆಟ್ಟಿರ ಜಿ. ತಮ್ಮಯ್ಯ (ರಾಜು), ತಾಯಿ ಜಾನಕಿ (ಜಾಜಿ), ಜಿತಿನ್ ಅವರ ತಾಯಿ ಜಾನ್ಸಿ ಸೇರಿದಂತೆ ಕುಟುಂಬದವರು, ಬಂಧುಮಿತ್ರರು ಸ್ನೇಹಿತರು ವೇಳೆ ಉಪಸ್ಥಿತರಿದ್ದರು. ಜನವರಿ 1ರಂದು ಕೇರಳದ ತ್ರಿಶೂರ್ನಲ್ಲಿ ಮತ್ತೊಂದು ಕಾರ್ಯಕ್ರಮ ಜರುಗಲಿದೆ.

ಪೂವಮ್ಮ , ಜಿತಿನ್ ಕ್ರೀಡಾ ದಂಪತಿಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿದ್ದಾರೆ. ಕೊಡಗು ಮೂಲಕ 31 ವರ್ಷದ ಪೂವಮ್ಮ 2014ರ ಇಂಚೋನ್ ಏಷ್ಯಾಡ್‍ನಲ್ಲಿ 1 ಚಿನ್ನ 1, ಕಂಚು ಮತ್ತು 2018ರ ಜಕಾರ್ತ ಏಷ್ಯಾಡ್‍ನಲ್ಲಿ 2 ಚಿನ್ನ ಜಯಿಸಿದ್ದರು.

Related Posts

Leave a Reply

Your email address will not be published.

How Can We Help You?