ಸಾವಿನಲ್ಲೂ ಸಾರ್ಥಕತೆ ಮೆರೆದ ಪುಂಜಾಲಕಟ್ಟೆಯ ಸತೀಶ್

ಕಳೆದ ಭಾನುವಾರ ಪುಂಜಾಲಕಟ್ಟೆಯಲ್ಲಿ ದ್ವಿಚಕ್ರ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಸತೀಶ್ ಎಂಬಾತನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಅಂಗಾಂಗ ದಾನಕ್ಕೆ ನಿರ್ಧರಿಸಿದ್ದರು, ಇಂದು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಂಗಾಂಗ ದಾನಕ್ಕೆ ವ್ಯವಸ್ಥೆಯನ್ನು ಮಾಡಲಾಗಿತ್ತು.

ರಸ್ತೆ ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 32 ಹರೆಯದ ಸತೀಶ್ ಅವರ ಅಂಗಾಂಗ ದಾನ ಮಾಡಲಾಗಿದೆ.

ಸತೀಶ್ ಅವರ ಬ್ರೈನ್ ನಿಷ್ಕ್ರಿಯಗೊಂಡ ಹಿನ್ನೆಲೆ ಕುಟುಂಬಸ್ಥರಿಂದ ಅಂಗಾಂಗ ದಾನಕ್ಕೆ ನಿರ್ಧಾರಿಸಿದ್ದರು. ಹೃದಯ, ಲಿವರ್, ಕಿಡ್ನಿ ದಾನಕ್ಕೆ ಅವರ ಕುಟುಂಬ ನಿರ್ಧಾರ ಮಾಡಿದ್ದು ಇಂದು ಗ್ರೀನ್ ಕಾರಿಡಾರ್ ವ್ಯವಸ್ಥೆಯಲ್ಲಿ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯಿಂದ  ಹೃದಯವನ್ನು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ, ಲಿವರ್ ಬೆಂಗಳೂರಿನ ನಾರಾಯಣ್ ಹೃದಯಾಲಯಕ್ಕೆ ರವಾನೆ ಮಾಡಲಾಯಿತು. ಒಂದು ಕಿಡ್ನಿ ಉಡುಪಿ ಮಣಿಪಾಲ್ ಆಸ್ಪತ್ರೆಗೆ, ಮತ್ತೊಂದು ಕಿಡ್ನಿ ಮಂಗಳೂರಿನ ಕೆಎಸ್ ಹೆಗ್ಡೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ಹೃದಯ ಮತ್ತು ಲಿವರ್‍ನ್ನು ರವಾನೆ ಮಾಡಲಾಯಿತು. ಮಂಗಳೂರು  ಝೀರೊ ಟ್ರಾಫಿಕ್ ವ್ಯವಸ್ಥೆ ಮೂಲಕ ಆಂಬ್ಯುಲೆನ್ಸ್‍ನಲ್ಲಿ ಅಂಗಾಂಗ ಸಾಗಿಸಲು ವ್ಯವಸ್ಥೆ ಮಾಡಿದರು.

ಪುಂಜಲಕಟ್ಟೆ ಬಳಿ ಭಾನುವಾರ ನಡೆದಿದ್ದ ದ್ವಿಚಕ್ರ ವಾಹನ ಅಪಘಾತವಾಗಿ ಆಗಿ ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೊಳಗಾಗಿದ್ದರು. ನಿನ್ನೆ ಆಸ್ಪತ್ರೆಯ ವೈದ್ಯರು ಅವರ ಮೆದುಳು ನಿಷ್ಕ್ರಿಯಗೊಂಡ ಬಗ್ಗೆ ಘೋಷಣೆ ಮಾಡಿದ  ಹಿನ್ನೆಲೆಯಲ್ಲಿ ಕುಟುಂಬಸ್ಥರು ಸತೀಶ್ ಅವರ ಅಂಗಾಂಗ ದಾನಕ್ಕೆ ನಿರ್ಧರಿಸಿದರು. ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಸಕಲ ಪ್ರಕ್ರಿಯೆಗಳ ಬಳಿಕ ಬೆಳಗ್ಗೆ ಸುಮಾರು 11.50 ಸುಮಾರಿಗೆ ಹೃದಯ ಮತ್ತು ಲಿವರನ್ನು ಬೆಂಗಳೂರಿಗೆ ರವಾನೆ  ಮಾಡಲಾಗಿತ್ತು.

Related Posts

Leave a Reply

Your email address will not be published.

How Can We Help You?