ದೇವಳದ ಎದುರು ಗದ್ದೆಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಳದ ಎದುರು ಭಾಗದ ಕಂಬಳಗದ್ದೆಯಲ್ಲಿರುವ ಕೆರೆಯಲ್ಲಿ ವ್ಯಕ್ತಿಯ ಚಪ್ಪಲಿ, ಕೆರೆ ಪಕ್ಕ ಸ್ಕೂಟರ್ ಪತ್ತೆ ಹಿನ್ನಲೆಯಲ್ಲಿ ವ್ಯಕ್ತಿ ಕೆರೆಯಲ್ಲಿ ಬಿದ್ದು ಕಣ್ಮರೆಯಾಗಿದ್ದಾರೆಂದು ಶಂಕೆ ವ್ಯಕ್ತಪಡಿಸಿ ಅಗ್ನಿಶಾಮಕ ಪೆÇಲೀಸರು ಕೆರೆ ಪರಿಶೀಲನೆ ನಡೆಸಿದಾಗ ಇಂಟರ್‍ನೆಟ್ ಕೇಬಲ್ ಸಂಸ್ಥೆಯ ಮನೋಹರ್ ಪ್ರಭು (50ವರ್ಷ) ಅವರ ಮೃತ ದೇಹ ಪತ್ತೆಯಾಗಿದೆ. ಅಗ್ನಿಶಾಮಕದಳವರು ಮೃತ ದೇಹವನ್ನು ಮೇಲೆತ್ತಿದ್ದಾರೆ.ಮನೋಹರ ಪ್ರಭು ಪುತ್ತೂರು ದರ್ಬೆ ನಿವಾಸಿಯಾಗಿರುತ್ತಾರೆ.

ಪುತ್ತೂರು ಅಗ್ನಿಶಾಮಕದಳದ ರುಕ್ಮಯ ಗೌಡರವರ ನೇತೃತ್ವದಲ್ಲಿ ಕೃಷ್ಣ ಜಾಲಿಬೇರ, ತೌಸಿಪ್ ಯಾನೆ ಮುಲ್ಲಾ ಅವರು ಗರುಡಪಾತಾಳದ ಮೂಲಕ ಪತ್ತೆಮಾಡಿ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮತ್ತು ಎರಡು ಮಕ್ಕಳು ಬಂಧುಬಳಗವನ್ನು ಅಗಲಿದ್ದಾರೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

Related Posts

Leave a Reply

Your email address will not be published.

How Can We Help You?