Home 2021 (Page 2)

ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ ಆತ್ಮಹತ್ಯೆ

ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಸುಳ್ಯ

ಮತಪತ್ರಗಳ ವಿಂಗಡೆ ಕಾರ್ಯ ಪೂರ್ಣ : ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ

ಮಂಗಳೂರಿನ ರೊಸಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂನ್ನು ತೆರೆಯಲಾಯಿತು. ಬಳಿಕ ಮತಪತ್ರಗಳ ವಿಂಗಡನೆ ಮಾಡಲಾಯಿತು. 10:45ರ ಸುಮಾರಿಗೆ ಮತ ವಿಂಗಡನೆ ಕಾರ್ಯ ಪೂರ್ಣಗೊಂಡಿದ್ದು, ಕೆಲಹೊತ್ತಿನಲ್ಲಿ ಮತ ಎಣಿಕೆಗೆ ಚಾಲನೆ ಸಿಗಲಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ ದ್ವಿ

ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು

ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.  ಮಾಜಿ ಸಚಿವ ಎಚ್.ಡಿ ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ, 2247 ಮತಗಳನ್ನು ಪಡೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 

ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು

ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಪ್ರತಸ್ಪರ್ಧಿ ಮಂಥರ್ ಗೌಡ ಅವರ ವಿರುದ್ಧ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.

ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ನಿಧನ

ಬೆಂಗಳೂರು:ರಾಷ್ಟ್ರಕವಿ ಕುವೆಂಪು ಅವರ ಸೊಸೆಯಾಗಿರುವ ರಾಜೇಶ್ವರಿ ಅವರು ವಯೋ ಸಹಜ ಅನಾರೋಗ್ಯದ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದ ಬಡಾವಣೆಯೊಂದರಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ರಾಜೇಶ್ವರಿ ಅವರು

ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭ

ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8

State award for Mangalore University youth Red Cross

It is a great pleasure to us to inform you that, Mangalore University, Youth Red Cross Wing has been adjudged as the Best Performing University in recognition of Youth Development Activities and support in strengthening Youth Red Cross activities at Mangalore University, Mangalagangotri at all

ಸರ್ವಧರ್ಮದ ಸತ್ವ ನಾರಾಯಣಗುರುಗಳ ತತ್ವ- ಡಾ. ಗಣನಾಥ ಎಕ್ಕಾರು

ಮಲ್ಪೆ : 19ನೇ ಯ ಶತಮಾನದ ದಾರ್ಶನಿಕ, ಮಾನವತಾವಾದಿ, ಬ್ರಹ್ಮಶ್ರೀ ನಾರಾಯಣಗುರುಗಳು ನೀಡಿದ ಸಂದೇಶ ಒಂದು ಕಾಲ, ಜಾತಿ, ಮತ, ಧರ್ಮಕ್ಕೆ ಸೀಮಿತವಾಗದೆ, ಸಾರ್ವಕಾಲಿಕ ಸತ್ಯದೊಂದಿಗೆ ಸರ್ವಧರ್ಮಗಳ ತತ್ವವನ್ನು ಜಗತ್ತಿಗೆ ಸಾರಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರಾದ ಡಾ| ಗಣನಾಥ

ಡಿ.6ರಂದು ಡಾ.ಕದ್ರಿ ಗೋಪಾಲನಾಥ್‍ರವರ ಜನ್ಮದಿನ ಆಚರಣೆ

ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪುರಸ್ಕøತ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನದ ಅಂಗವಾಗಿ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಡಾ.ಕದ್ರಿ ಗೋಪಾಲನಾಥ್‍ರವರ ಸಮಾಧಿಯ ಜಾಗದಲ್ಲಿ ‘ಕದ್ರಿ ಸಂಗೀತ ಸೌರಭ-2021’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಣಿಕಾಂತ್ ಕದ್ರಿ ಹೇಳಿದರು. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ನನ್ನ

ಪಡುಬಿದ್ರಿ ಮಹಾಲಿಂಗೇಶ್ವರನಿಗೆ ದೀಪೋತ್ಸವ ಸಂಭ್ರಮ

ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಾರ್ಷಿಕ ದೀಪೋತ್ಸವ ಸಹಸ್ರಾರು ಭಕ್ತಾದಿಗಳ ಕೂಡುವಿಕೆಯಿಂದ ಬಹಳ ಅದ್ಧೂರಿಯಾಗಿ ನಡೆದು ಸಮಾಪನ ಗೊಂಡಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆದ ಈ ದೀಪೋತ್ಸವದಲ್ಲಿ ಗ್ರಾಮ ಹಾಗೂ ಸ್ಥಳೀಯ ಗ್ರಾಮಗಳಿಂದ ಸಾವಿರಾರು ಭಕ್ತಾಧಿಗಳು ಆಗಮಿಸಿ ಸ್ವಯಂ ಪ್ರೇರಿತರಾಗಿ