ಕೊರಗರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿದ ಸಚಿವ ಸುನಿಲ್ ಕುಮಾರ್: ನ್ಯಾಯ ಒದಗಿಸುವ ಭರವಸೆ

ಕುಂದಾಪುರ:  ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ನಡೆದ ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೌರ್ಜನ್ಯಕ್ಕೊಳಗಾದ ಕೊರಗ ಕಾಲನಿಗೆ ಭಾನುವಾರ ಇಂಧನ, ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಧೈರ್ಯ ತುಂಬಿದರು.

ಕೊಗರಗ ಕಾಲನಿಗೆ ಬೆಳಿಗ್ಗೆ ಆಗಮಿಸಿದ ಸಚಿವರು, ಮೆಹಂದಿ ದಿನ ನಡೆದ ಸಂಪೂರ್ಣ ವಿವರಗಳನ್ನು ಪಡೆದುಕೊಂಡರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಾನು ರಾಜ್ಯ ಪ್ರವಾಸದಲ್ಲಿ ಇದ್ದಿದ್ದರಿಂದ ಇಲ್ಲಿಗೆ ಬರಲು ತಡವಾಯಿತು. ಕೊರಗ ಸಮುದಾಯವು ಜಿಲ್ಲೆಯಲ್ಲಿ ಆರ್ಥಿಕ ಹಾಗೂ ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ವರ್ಗವಾಗಿದೆ. ಅವರ ಮನೆಗಳಲ್ಲಿ ಶುಭ ಕಾರ್ಯ ನಡೆಸುವ ಸಂದರ್ಭದಲ್ಲಿ ನಮ್ಮ ಅಧಿಕಾರಿಗಳಿಂದ ತಪ್ಪಾಗಿದೆ. ಇದು ಯಾವುದೇ ಕಾರಣಕ್ಕೂ, ಸಮರ್ಥನೀಯವಲ್ಲ ಎಂದರು.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಪ್ರಯತ್ನ ಮಾಡಿದ್ದಾರೆ. ಅಲ್ಲದೇ ನಿನ್ನೆ ಗೃಹಸಚಿವರು ಸಹ ಬಂದು ಭೇಟಿ ನೀಡಿದ್ದಾರೆ. ಗೃಹ ಇಲಾಖೆಯಿಂದ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಕಾನೂನು ಕ್ರಮಗಳನ್ನು ಕೈಗೊಳ್ಳಲು ಸಾಧ್ಯ ಆಗುತ್ತೋ ಆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶವನ್ನು ಹಾಗೂ ಭರವಸೆಯನ್ನು ನೀಡಿ ಹೋಗಿದ್ದಾರೆ ಎಂದು ಸಚಿವರು ಹೇಳಿದರು.

ನಾನು ನಮ್ಮ ಜಿಲ್ಲಾಡಳಿತ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ತಿಳಿಸುವುದೇನೆಂದರೆ ಇತಿಮಿತಿ ವ್ಯಾಪ್ತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಬೇಕು. ಆ ಸೂಚನೆಯನ್ನು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಉನ್ನತ ಅಧಿಕಾರಿಗಳಿಗೆ ಕೊಟ್ಟಿದ್ದೇನೆ. ಪೊಲೀಸ್ ದೌರ್ಜನ್ಯ ವಿಚಾರವಾಗಿ ಇಂದು ಮಧ್ಯಾಹ್ನ12 ಗಂಟೆಗೆ ಜಿಲ್ಲಾಧಿಕಾರಿಯೊಂದಿಗೆ ಮತ್ತೊಮ್ಮೆ ಚರ್ಚಿಸಲಿದ್ದೇನೆ. ಇಂಥ ಘಟನೆಗಳು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು.

ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಮಾಜಿ ಜಿಪಂ ಅಧ್ಯಕ್ಷ ದಿನಕರ ಬಾಬು, ಆಡಿಷನಲ್ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ, ಸುಧಾಕರ್, ನಾಯಕ್, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ, ಕೋಟ ಪ್ರಭಾರ ಠಾಣಾಧಿಕಾರಿ ತಿಮ್ಮೇಶ್ ಬಿ ಎನ್ ಇದ್ದರು.

Related Posts

Leave a Reply

Your email address will not be published. Required fields are marked *

How Can We Help You?