ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ ಹಾಸ್ಯಾಸ್ಪದ : ಸುನಿಲ್ ಕುಮಾರ್

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರ ಹಾಸ್ಯಾಸ್ಪ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಸುಬ್ರಹ್ಮಣ್ಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಕೇವಲ ಡಿಪಿಆರ್ ಸಿದ್ಧಪಡಿಸಲು 5 ವರ್ಷ ತೆಗೆದುಕೊಂಡಿದ್ದಾರೆ. ತಮಿಳುನಾಡು ವಿರೋಧಿಸಿದ ಸಂದರ್ಭದಲ್ಲಿ ರಾಜ್ಯದ ಸ್ಪಷ್ಟ ನಿಲುವನ್ನು ತಿಳಿಸುವಲ್ಲಿ ವಿಫಲವಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರ, ರೈತರ ನೀರಾವರಿ ಸಮಸ್ಯೆಯ ಬಗ್ಗೆ ಕಾಳಜಿಯಿಲ್ಲ. ಕಾಂಗ್ರೆಸ್‍ಗೆ ರಾಜ್ಯದ ಹಿತಾಸಕ್ತಿಯೂ ಇಲ್ಲ, ಜನರ ಹಿತಾಸಕ್ತಿಯೂ ಇಲ್ಲ, ಕೇವಲ ಸ್ವ ಹಿತಾಸಕ್ತಿ ಮಾತ್ರ ಇದೆ. ಬಿಜೆಪಿ ಸರಕಾರ ಮೇಕೆದಾಟು ಯೋಜನೆಯ ಜಾರಿಗೆ ಬದ್ಧವಾಗಿದೆ. ಯೋಜನೆ ಜಾರಿಗೊಳಿಸಿ ಬೆಂಗಳೂರು ಸೇರಿದಂತೆ ರಾಜ್ಯದ ಜನತೆಗೆ ನೀರಾವರಿ ಪೂರೈಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದರು.

Related Posts

Leave a Reply

Your email address will not be published. Required fields are marked *

How Can We Help You?