ವಿವಿ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಲು ಎಲ್ಲ ಕ್ರಮ : ಪ್ರೊ|ಪಿ. ಎಸ್.ಯಡಪಡಿತ್ತಾಯ ಹೇಳಿಕೆ

ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಮುಂದಿನ ಒಂದು ತಿಂಗಳೊಳಗೆ ಪ್ರಕಟಿಸಲು ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ವಿ.ವಿ. ಕುಲಪತಿ ಪ್ರೊ|ಪಿ. ಎಸ್.ಯಡಪಡಿತ್ತಾಯ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷದಿಂದ ಡಿಜಿಟಲ್ ಮೌಲ್ಯಮಾಪನಕ್ಕೆ ಸಿದ್ಧತೆ ನಡೆಸಲಾಗಿದೆ. ಈ ಬಗ್ಗೆ ಇ -ಟೆಂಡರ್ ಪ್ರಕ್ರಿಯೆ ನಡೆದಿದೆ. ಸಿಂಡಿಕೇಟ್ ಅನುಮತಿ ಪಡೆದು ಶೀಘ್ರವೇ ಕ್ರಮ ವಹಿಸಲಾಗುವುದು.

ವಿ.ವಿ. (ಪರೀಕ್ಷಾಂಗ) ಕುಲಸಚಿವ ಪ್ರೊ| ಪಿ. ಎಲ್. ಧರ್ಮ ಅವರು ಮಾತನಾಡಿ, ಕೊರೊನಾ ಒತ್ತಡ ಹಾಗೂ ಬಂದ್ ಸೇರಿದಂತೆ ಹಲವು ಕಾರಣದಿಂದ ಪರೀಕ್ಷೆ ನಡೆಸಲು ಬಹಳಷ್ಟು ಸವಾಲುಗಳನ್ನು ಎದುರಿಸಬೇಕಾಯಿತು. ಕೆಲವೊಂದು ಕಾಲೇಜುಗಳಲ್ಲಿ ಇಂಟರ್‌ನಲ್ ಪೇಪರ್ ಕೋಡ್ ಲಿಂಕ್ ಮಾಡುವಾಗ ಆಗಿರುವ ಸಮಸ್ಯೆಯಿಂದ ತೊಂದರೆ ಹಾಗೂ ಫಲಿತಾಂಶ ವಿಳಂಬ ಆಗಿತ್ತು. ಈ ಕುರಿತು ಸಮಸ್ಯೆ ಆಗಿರುವ 38 ಕಾಲೇಜುಗಳ ಪ್ರಾಂಶುಪಾಲರಿಂದ ದಾಖಲೆ ಪಡೆದು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗಿದೆ ಎಂದರು.

ಆನಂತರ ಕುಲಸಚಿವ ಪ್ರೊ| ಕಿಶೋರ್ ಕುಮಾರ್ ಸಿ.ಕೆ. ಮಾತನಾಡಿ ಮಂಗಳೂರು ವಿ.ವಿ.ಯ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಲ್ಯಾಪ್‌ಟಾಪ್ ಖರೀದಿಯಲ್ಲಿ ಹಗರಣ ನಡೆದಿದೆ ಎಂಬುದು ಸುಳ್ಳು ಆರೋಪ. ಈ ಹಿಂದೆ ನೀಡಿದ ಲ್ಯಾಪ್‌ಟಾಪ್‌ನಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿತ್ತು. ಇಂತಹ ಸಮಸ್ಯೆ ಬರಬಾರದು ಎಂಬ ಕಾರಣಕ್ಕಾಗಿಯೇ ನಿಯಮಾವಳಿಯಂತೆ ಉತ್ತಮ ಗುಣಮಟ್ಟದ ಲ್ಯಾಪ್‌ಟಾಪ್ ಅನ್ನು ಈ ಬಾರಿ ಖರೀದಿಸಲಾಗಿದೆ’ ಎಂದು ತಿಳಿಸಿದರು.

ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಹಣಕಾಸು ಅಧಿಕಾರಿ ಪ್ರೊ| ನಾರಾಯಣ ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *

How Can We Help You?