ಕಾಲೇಜುಗಳಲ್ಲಿ ಸ್ಕಾರ್ಪ್, ಕೇಸರಿ ಶಾಲು ವಿವಾದ : ಕಾಲೇಜು ಆಡಳಿತ ಮಂಡಳಿಯೇ ಇತ್ಯರ್ಥಪಡಿಸಬೇಕು : ಪ್ರೊ| ಪಿ.ಎಸ್. ಯಡಪಡಿತ್ತಾಯ

ಜಿಲ್ಲೆಯ ಕೆಲವು ಕಾಲೇಜುಗಳಲ್ಲಿ ಎದ್ದಿರುವ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟ ಕಾಲೇಜು ಆಡಳಿತ ಮಂಡಳಿಯೇ ಇತ್ಯರ್ಥ ಪಡಿಸಬೇಕು. ಇದಕ್ಕೆ ಪ್ರತಿಷ್ಠಿತ ಕಾಲೇಜುಗಳ ಪ್ರಾಂಶುಪಾಲರನ್ನೊಳಗೊಂಡ ಸಮಿತಿ ರಚಿಸಿ ಮಾರ್ಗಸೂಚಿ ರೂಪಿಸಲಾಗುವುದು ಎಂದು ಪ್ರೊ| ಪಿ.ಎಸ್. ಯಡಪಡಿತ್ತಾಯ ಹೇಳಿದರು.

 ಅವರು, ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಇಂತಹ ಭಾವನಾತ್ಮಕ ವಿಚಾರಗಳಿಂದ ಕಾಲೇಜುಗಳಲ್ಲಿ ಕಲಿಕಾ ವಾತಾವರಣ ಕೆಡದಂತೆ ವಿ.ವಿ. ಮಟ್ಟದಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು. ಈ ಸಮಿತಿಯ ಸಲಹೆ ಸೂಚನೆಗಳನ್ನು ಆಧರಿಸಿ ಕೆಲವೊಂದು ಮಾರ್ಗಸೂಚಿ ರಚಿಸಿ ಅದನ್ನು ಸಿಂಡಿಕೇಟ್ ಸಭೆಯ ಒಪ್ಪಿಗೆ ಪಡೆದು ಎಲ್ಲ ಕಾಲೇಜುಗಳಿಗೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.

Related Posts

Leave a Reply

Your email address will not be published.

How Can We Help You?