ಪ್ರಧಾನಿ ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾ ವೈಫಲ್ಯ: ಇದೊಂದು ಪೂರ್ವ ನಿಯೋಜಿತ ನಾಟಕ: ಜಿಎ ಬಾವಾ

ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿಯ ವೇಳೆ ಉಂಟಾದ ಭದ್ರತಾ ಲೋಪವನ್ನು ಮುಂದಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಅಲ್ಲ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಜಿಎ ಬಾವಾ ಅಭಿಪ್ರಾಯ ಪಟ್ಟಿದ್ದಾರೆ.

ಈ ವಿಚಾರವಾಗಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೇಶದ ಅತೀ ಉನ್ನತ ಭದ್ರತಾ ವ್ಯವಸ್ಥೆಯನ್ನೊಳಗೊಂಡಿರುವ ಪ್ರಧಾನ ಮಂತ್ರಿ ಅವರ ಭದ್ರತಾ ವಿಚಾರದಲ್ಲಿ ಲೋಪ ಉಂಟಾಗಿರುವುದ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯ ವಾಗಿದ್ದು, ಅದನ್ನು ಕಾಂಗ್ರೆಸ್ ತಲೆಗೆ ಕಟ್ಟುತ್ತಿರುವುದು ಹಾಸ್ಯಾಸ್ಪದ ಎಂದಿದ್ದಾರೆ.

ಅಲ್ಲದೇ ಪಂಜಾಬ್ ನಲ್ಲಿ ನಡೆಯಬೇಕಿದ್ದ ಸಮಾವೇಶದಲ್ಲಿ ಬಿಜೆಪಿಯವರು ಭಾರೀ ಜನ ಸೇರುವ ನಿರೀಕ್ಷೆಯಲ್ಲಿದ್ದು, ಜನ ಸೇರದ ಹಿನ್ನೆಲೆಯಲ್ಲಿ ಮತ್ತೆ ಹಿಂದಿರುಗಿ ಹೋಗಲು ಮಾಡಿರುವ ನಾಟಕ ಇದಾಗಿದೆ ಎಂದು ಅವರು ಹೇಳಿದ್ದಾರೆ.

Related Posts

Leave a Reply

Your email address will not be published.

How Can We Help You?